ಗದಗ(ಸೆ.04): ಮಹಾಮಾರಿ ಕೊರೋನಾ ಸೋಂಕಿನ‌ ಭಯದಿಂದ ವ್ಯಕ್ತಿಯೋರ್ವ ಆಸ್ಪತ್ರೆ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ(ಗುರುವಾರ) ರಾತ್ರಿ ನಗರದ ಹೊರವಲಯದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಬಸವರಾಜ ಈಳಗೇರ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ.

ಬಸವರಾಜ ಈಳಗೇರ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ‌ ಗ್ರಾಮದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊರೋನಾ ಸೋಂಕಿನ‌ ಭಯದಿಂದ ಜಿಲ್ಲಾಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಫೇಲ್ ಆಗಿದ್ದ ವಿದ್ಯಾರ್ಥಿ ಕಾಲೇಜಿನ ಪ್ರಥಮ

ಮೃತ ಬಸವರಾಜ ಈಳಗೇರ ಇದಕ್ಕೂ ಮೊದಲು ಹಲವಾರು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದನು ಎಂದು ಹೇಳಲಾಗುತ್ತಿದೆ. ನಿನ್ನೆ(ಗುರುವಾರ) ರಾತ್ರಿ ವೇಳೆ ಆಸ್ಪತ್ರೆಯಲ್ಲಿ ಬಸವರಾಜ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.