Asianet Suvarna News Asianet Suvarna News

ಹಾವೇರಿಯ ಅಗಡಿ ಗ್ರಾಮದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲು

ಹಳ್ಳದಲ್ಲಿ ಮೀನು ಹಿಡಿಯಲು ಹೋದ ವೇಳೆ ನೀರಿನ ರಭಸಕ್ಕೆ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬ ನೀರು ಪಾಲು| ಗ್ರಾಮದ ಹೊಲವಲಯದಲ್ಲಿರುವ ಹಳ್ಳ ಶುಕ್ರವಾರ ಭಾರಿ ಮಳೆಯಾಗಿ ತುಂಬಿ ಹರಿಯುತ್ತಿತ್ತು| ಶನಿವಾರ ಆ ಹಳ್ಳದಲ್ಲಿ ಮೀನು ಹಿಡಿಯಲು ಹೋದ ವೇಳೆ ಕಾಲು ಜಾರಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದಾನೆ| ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಪೊಲೀಸರು ಪತ್ತೆ ಕಾರ್ಯ ಶುರು ಮಾಡಿಕೊಂಡಿದ್ದಾರೆ|

Person Dead While Fishing in Haveri Distrct Agadi Village
Author
Bengaluru, First Published Oct 6, 2019, 8:45 AM IST

ಹಾವೇರಿ(ಅ.5): ಹಳ್ಳದಲ್ಲಿ ಮೀನು ಹಿಡಿಯಲು ಹೋದ ವೇಳೆ ನೀರಿನ ರಭಸಕ್ಕೆ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬ  ನೀರು ಪಾಲಾಗಿರುವ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ನೀರು ಪಾಲಾದ ವ್ಯಕ್ತಿಯನ್ನು ಸುಭಾಷ ಬೆನ್ನೂರ (48) ಎಂದು ಗುರುತಿಸಲಾಗಿದೆ. ಗ್ರಾಮದ ಹೊಲವಲಯದಲ್ಲಿರುವ ಹಳ್ಳ ಶುಕ್ರವಾರ ಭಾರಿ ಮಳೆಯಾಗಿ ತುಂಬಿ ಹರಿಯುತ್ತಿತ್ತು. ಶನಿವಾರ ಆ ಹಳ್ಳದಲ್ಲಿ ಮೀನು ಹಿಡಿಯಲು ಹೋದ ವೇಳೆ ಕಾಲು ಜಾರಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದಾನೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ವಿಷಯ ತಿಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಪೊಲೀಸರು ಪತ್ತೆ ಕಾರ್ಯ ಶುರು ಮಾಡಿಕೊಂಡಿದ್ದಾರೆ. ಸಂಜೆವರೆಗೂ ಶೋಧ ಕಾರ್ಯಾಚರಣೆ ನಡೆಸಿದರೂ ಸುಳಿವು ಸಿಕ್ಕಿಲ್ಲ ಎಂದು ಗ್ರಾಮೀಣ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ ಪವಾರ್‌ ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಶಾಸಕ ನೆಹರು ಓಲೇಕಾರ ಭೇಟಿ ನೀಡಿದ್ದು, ಆತನ ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ. ತ್ವರಿತಗತಿಯಲ್ಲಿ ಶೋಧ ಕಾರ್ಯ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದಾರೆ. 
 

Follow Us:
Download App:
  • android
  • ios