ವಿಜಯಪುರ: ಚಿಕಿತ್ಸೆಗಾಗಿ ಪರದಾಡಿದ್ದ ರೋಗಿ ಸಾವು
ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳುತ್ತಿಲ್ಲ ಎಂದು ಸಮೇತ ಜಿಲ್ಲಾಡಳಿತ ಕಚೇರಿಗೆ ಆಗಮಿಸಿದ್ದ ಮೃತ ರೋಗಿ ಕುಟುಂಬ| ರೋಗಿಯ ಸ್ಥಿತಿ ನೋಡಿ ತಕ್ಷಣ ಜಿಲ್ಲಾಸ್ಪತ್ರೆ ವೈದ್ಯರಿಗೆ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡುವಂತೆ ಸೂಚಿಸಿದ್ದ ಡಿಸಿ ಪಾಟೀಲ| ಶುಕ್ರವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟ ರೋಗಿ|
ವಿಜಯಪುರ(ಜು.12): ಆಸ್ಪತ್ರೆಗೆ ದಾಖಲಾಗಲು ಪರದಾಡಿದ್ದ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೇ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳುತ್ತಿಲ್ಲ ಎಂದು ಈ ರೋಗಿ ಕುಟುಂಬ ಸಮೇತ ಜಿಲ್ಲಾಡಳಿತ ಕಚೇರಿಗೆ ಆಗಮಿಸಿದ್ದರು. ಆಗ ಡಿಸಿ ಪಾಟೀಲ ರೋಗಿಯ ಸ್ಥಿತಿ ನೋಡಿ ತಕ್ಷಣ ಜಿಲ್ಲಾಸ್ಪತ್ರೆ ವೈದ್ಯರಿಗೆ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡುವಂತೆ ಸೂಚಿಸಿದ್ದರು. ಆದರೆ ಶುಕ್ರವಾರ ರಾತ್ರಿ ಈ ರೋಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈತನ ಸ್ವ್ಯಾಬ್ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿತ್ತು. ಆತನ ಪರೀಕ್ಷೆ ವರದಿಯಲ್ಲಿ ನೆಗೆಟಿವ್ ಬಂದಿದೆ ಎಂದು ಡಿಸಿ ತಿಳಿಸಿದ್ದಾರೆ.
'ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣದಿಂದ ಬೇಸತ್ತು ಕಾಂಗ್ರೆಸ್‌ಗೆ ಬೆಂಬಲ'
ಎಸ್ಪಿ ಹೋಂ ಕ್ವಾರಂಟೈನ್:
ಎಸ್ಪಿ ಅನುಪಮ ಅಗರವಾಲ್ ಅವರು ಸ್ವಯಂ ಪ್ರೇರಿತರಾಗಿ ಮೂರು ದಿನಗಳ ಕಾಲ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ ಎಂದು ಡಿಸಿ ಪಾಟೀಲ ತಿಳಿಸಿದ್ದಾರೆ. ಶುಕ್ರವಾರವಷ್ಟೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಎಎಸೈಗೆ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಎಸ್ಪಿ ಕಚೇರಿಯನ್ನು ತಾತ್ಕಾಲಿಕವಾಗಿ ಸೀಲ್‌ಡೌನ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ಪಿ ಕೂಡ ಸ್ವಯಂ ಪ್ರೇರಿತರಾಗಿ 3 ದಿನಗಳ ಕಾಲ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ ಎಂದು ತಿಳಿಸಿದರು.