ಹುಬ್ಬಳ್ಳಿ(ಮೇ.27): ಮಹಾರಾಷ್ಟ್ರದಿಂದ ನಡೆದುಕೊಂಡು ಬಂದಿದ್ದ ವ್ಯಕ್ತಿಯೊಬ್ಬ ಆಸ್ಪತ್ರೆಯಿಂದ ಯಾರಿಗೂ ಹೇಳದೆ ಕೇಳದೆ ಓಡಿ ಹೋದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ನಡೆದಿದೆ . 

ಮಂಜುನಾಥ್(33) ಎನ್ನುವ ವ್ಯಕ್ತಿ ಆಸ್ಪತ್ರೆಯಿಂದ ಪರಾರಿಯಾಗಿರುವಾತ. ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದವನಾದ ಮಂಜುನಾಥ್ ಕೊರೋನಾ ಲಾಲಕ್‌ಡೌನ್ ಮಧ್ಯದಲ್ಲಿಯೂ ಮಹಾರಾಷ್ಟ್ರದಿಂದ ನಡೆದುಕೊಂಡು ಗ್ರಾಮಕ್ಕೆ ಬಂದಿದ್ದ. ಹೀಗಾಗಿ ಮನೆಯವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಒತ್ತಾಯಿಸಿದ್ದರು. ಹೀಗಾಗಿ ಮನೆಯವರ ಒತ್ತಾಯಕ್ಕೆ ಕುಂದಗೋಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು .

ಲಾಕ್‌ಡೌನ್‌ ಎಫೆಕ್ಟ್‌: ಮದುವೆ ಮುಂದೂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ 

ಆದರೆ ಇದೀಗ ಅಲ್ಲಿಯೂ ನಿಲ್ಲದೆ ಮಂಜುನಾಥ್ ಪರಾರಿಯಾಗಿದ್ದಾನೆ. ಮಂಜುನಾಥ್ ಪರಾರಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಪರಾರಿಯಾಗಿರುವ ಮಂಜುನಾಥ್ ಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಈತನಿಗೆ ಕೊರೋನಾ ಪರೀಕ್ಷೆ ನಡೆಸಲಾಗಿತ್ತಾ?ಇಲ್ವಾ ಎಂಬುದರ ಬಗ್ಗೆ ಆರೋಗ್ಯಾಧಿಕಾರಿಗಳು ಸ್ವಷ್ಟವಾದ ಮಾಹಿತಿ ನೀಡಬೇಕಾಗಿದೆ.