ಬೆಳಗಾವಿ(ಡಿ.23): ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೇಯ ಕೃತ್ಯವೊಂದು ಜಿಲ್ಲೆಯಲ್ಲಿ ನಡೆದ ನಡೆದಿದೆ. ಹೌದು, ಮಾನಸಿಕ ಅಸ್ವಸ್ಥೆಯ ಮೇಲೆ ಕಾಮುಕನೊಬ್ಬ ತನ್ನ ಕಾಮತೃಷೆ ತೀರಿಸಿಕೊಂಡ ಘಟನೆ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದಲ್ಲಿ ನಡೆದಿದೆ. 

ಬೆಳಗಾವಿ: 7 ವರ್ಷದ ಪುಟ್ಟ ಬಾಲಕಿಯ ಮೇಲೆ ಕಾಮುಕನಿಂದ ರೇಪ್

ಮುತ್ತಪ್ಪ ನಾಯ್ಕರ್(30) ಎಂಬುವನೇ ಇಂತಹ ಹೇಯ ಕೃತ್ಯವೆಸಗಿದ ಆರೋಪಿಯಾಗಿದ್ದಾನೆ. ಭಾನುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ 24 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ ಮುತ್ತಪ್ಪ ನಾಯ್ಕರ್ ಅತ್ಯಾಚಾರವೆಸಗಿದ್ದನು. ಈ ಸಂಬಂಧ ಆರೋಪಿ ಮುತ್ತಪ್ಪ ನಾಯ್ಕರ್ ನನ್ನು ಪೊಲೀಸರು ಬಂಧಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಅತ್ಯಾಚಾರ ಸಂತ್ರಸ್ತೆ ಯುವತಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಈ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.