ವ್ಯಕ್ತಿತ್ವ ವಿಕಸನಕ್ಕಾಗಿ ಪಠ್ಯದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಅವಶ್ಯಕವಾಗಿರುತ್ತವೆ ಹಾಗಾಗಿ ಮಕ್ಕಳು ಸಂಗೀತ, ನೃತ್ಯ, ಭಾಷಣ, ಪ್ರಬಂಧದಂತಹ ಯಾವುದಾದರೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕೆಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಔರಾದ್‌ (ಸೆ.25): ವ್ಯಕ್ತಿತ್ವ ವಿಕಸನಕ್ಕಾಗಿ ಪಠ್ಯದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಅವಶ್ಯಕವಾಗಿರುತ್ತವೆ ಹಾಗಾಗಿ ಮಕ್ಕಳು ಸಂಗೀತ, ನೃತ್ಯ, ಭಾಷಣ, ಪ್ರಬಂಧದಂತಹ ಯಾವುದಾದರೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕೆಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಾಲೂಕಿನ ಸಂತಪೂರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಅವರಣದಲ್ಲಿ ಏರ್ಪಡಿಸಿದ್ದ 2022-23ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ಪ್ರತಿಭಾ ಕಾರಂಜಿ, ಕಲೋತ್ಸವ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳು ಕೇವಲ ಪಠ್ಯ ಅಧ್ಯಯನಕ್ಕೆ ಮಾತ್ರ ಸೀಮಿತವಾಗದೇ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ನಿರಂತರವಾಗಿ ಭಾಗವಹಿಸುವುದನ್ನು ರೂಢಿಸಿಕೊಳ್ಳಬೇಕು. ಎಲ್ಲರೂ ಬೆಳೆವ ಜೊತೆಗೆ ತಮ್ಮ ಊರು ಮತ್ತು ತಾಲೂಕಿನ ಹೆಸರನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬೇಕು ಎಂದು ತಿಳಿಸಿದರು.

ಸ್ಮಶಾನ ಭೂಮಿ ಖರೀದಿ ತಡವಾದ್ರೆ ದೇಣಿಗೆ ಸಂಗ್ರಹಿಸಿ ನೀಡ್ತೇವೆ: ಈಶ್ವರ ಖಂಡ್ರೆ

ಇಂದಿನ ಮಕ್ಕಳು ನಾಳಿನ ಪ್ರಜೆಗಳು. ಇವರ ಭವಿಷ್ಯ ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿರುತ್ತವೆ. ಆದ್ದರಿಂದ ಶಿಕ್ಷಕರು ಇನ್ನಷ್ಟುಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಶಿಕ್ಷಣ ಕ್ಷೇತ್ರಕ್ಕೆ ಮೊದಲ ಆಧ್ಯತೆ ನೀಡಿದ್ದು, ಕ್ಷೇತ್ರದಲ್ಲಿನ ಎಲ್ಲ ಶಾಲಾ ಕಾಲೇಜುಗಳಲ್ಲಿ ಅವಶ್ಯಕವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡುತ್ತಿದ್ದೇನೆ. ತಾಲೂಕು, ಶಿಕ್ಷಣ ಕ್ಷೇತ್ರದಲ್ಲಿ ಮೊದಲ ಸ್ಥಾನಕ್ಕೆ ತರುವ ನಿಟ್ಟಿನಲ್ಲಿ ಶಿಕ್ಷಕರು ಪ್ರಯತ್ನಿಸಬೇಕಿದೆ ಎಂದು ಅವರು ಹೇಳಿದರು.

ಸಂತಪೂರ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಪ್ರಕಾಶ ಪಾಂಡುರಂಗ ರಾಠೋಡ್‌, ಗ್ರಾಪಂ ಪಿಡಿಒ ಸಂತೋಷ ಪಾಟೀಲ್‌, ಆರಕ್ಷಕ ಉಪ ನಿರೀಕ್ಷಕ ಸಿದ್ದಣ್ಣ ಗಿರಿಗೌಡರ್‌, ಸಂತಪೂರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಾಜೀದ್‌, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿವಕುಮಾರ ಘಾಟೆ, ಕಮಲನಗರ ಅಧ್ಯಕ್ಷ ಲಿಂಗಾನಂದ ಮಹಾಜನ, ಶಿಕ್ಷಕರ ಸಂಘದ ಪಂಢರಿ ಆಡೆ, ರಮೇಶ ಮಾಸಿಮಾಡೆ, ವಿಶ್ವನಾಥ ಬಿರಾದಾರ, ಸೂರ್ಯಕಾಂತ ಬಿರಾದಾರ, ಗಜಾನನ ಮಳ್ಳಾ, ಬಸವರಾಜ ಪಾಟೀಲ್‌, ಅನೀಲಕುಮಾರ ಕರಂಜೆ, ಕಸಾಪ ತಾಲೂಕು ಅಧ್ಯಕ್ಷ ಡಾ. ಶಾಲಿವಾನ ಉದಗೀರೆ, ಶಿವಾಜಿ ಚಿಟ್‌ಗೀರೆ, ಗಫರ್‌ಖಾನ್‌, ಮುಖಂಡರಾದ ರಾಮಶೆಟ್ಟಿಪನ್ನಾಳೆ, ದೊಂಡಿಬಾ ನರೋಟೆ, ಶೇಷರಾವ್‌ ಕೋಳಿ, ಶಿವರಾಜ ಅಲ್ಮಾಜೆ, ವೆಂಕಟ ಡೊಂಬಾಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಔರಾದ-ಬೀದರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲನೆ: ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ್‌ ಬೀದರ-ಔರಾದ್‌ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ದಿಢೀರ್‌ ಭೇಟಿ ನೀಡಿ ಗುಣಮಟ್ಟವನ್ನು ಪರಿಶೀಲಿಸಿದರು. ಬಳಿಕ ಮಾತನಾಡಿ, ಬಹಳಷ್ಟುದಿನಗಳ ಬೇಡಿಕೆಯಾಗಿದ್ದ ಬೀದರ-ಔರಾದ್‌ ರಸ್ತೆ ನಿರ್ಮಾಣಕ್ಕಾಗಿ ಅನೇಕ ಬಾರಿ ಕೇಂದ್ರ ಸಚಿವರನ್ನು ಮನವಿ ಸಲ್ಲಿಸಿದ್ದೆ. ನನ್ನ ಮತ್ತು ಕೇಂದ್ರ ಸಚಿವ ಭಗವಂತ ಖೂಬಾ ಅವರ ಪ್ರಯತ್ನದಿಂದಾಗಿ ಈ ಕೆಲಸ ಆರಂಭವಾಗಿದೆ. 

ಔರಾದ ಕ್ಷೇತ್ರದ ಜನತೆಯ ಕನಸಿನ ಯೋಜನೆಯಾಗಿರುವ ಈ ರಸ್ತೆ ಕಾಮಗಾರಿ ಅತ್ಯಂತ ಗುಣಮಟ್ಟದಿಂದ ಆಗಬೇಕು ಎನ್ನುವುದು ನನ್ನ ಆಶಯವಾಗಿದೆ. ಅದರಂತೆ ಇಂದು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದೇನೆ ಎಂದು ಹೇಳಿದರು. ವಿವಿಧ ಸಂಘ ಸಂಸ್ಥೆಗಳ ಮುಖಂಡರು, ರೈತರು ಹಾಗೂ ಸಾರ್ವಜನಿಕರು ರಸ್ತೆ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲವೆಂದು ಕರೆ ಮಾಡಿ ದೂರು ನೀಡುತ್ತಿದ್ದಾರೆ. ನಾನು ಖುದ್ಧಾಗಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕೆಲಸ ಹೇಗೆ ನಡೆಯುತ್ತಿದೆ ಎನ್ನುವುದನ್ನು ನೋಡಿದ್ದೇನೆ. ಕೇಂದ್ರ ಸಚಿವರಾದ ನಿತೀನ್‌ ಗಡ್ಕರಿಯವರು ಹಾಗೂ ಭಗವಂತ ಖೂಬಾ ಅವರೊಂದಿಗೆ ಮಾತನಾಡುತ್ತೇನೆ. 

ಕುಲ ಕಸಬು ಕಸಿದ ವಚನ ಭ್ರಷ್ಟ ಸರ್ಕಾರ: ಪ್ರಣವಾನಂದ ಶ್ರೀ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಮಾಣಿಕಕುಮಾರ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಔರಾದ್‌-ಬೀದರ ಹೆದ್ದಾರಿಯು ಔರಾದ(ಬಿ) ಕ್ಷೇತ್ರ ಮತ್ತು ಬೀದರ ಜಿಲ್ಲೆಗೆ ಸಂಪರ್ಕ ಕಲ್ಪಿಸಿಕೊಡುವ ಪ್ರಮುಖ ರಸ್ತೆಯಾಗಿದೆ. ಈ ರಸ್ತೆಯ ಬಗ್ಗೆ ಜನರು ಬಹಳಷ್ಟುನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಅತ್ಯಂತ ಮಹತ್ವದ್ದಾಗಿರುವ ಈ ರಸ್ತೆ ಸರಿಯಾಗಿ ನಿರ್ಮಿಸಬೇಕು. ಕಾಮಗಾರಿಯ ಬಗ್ಗೆ ಯಾವುದೇ ರೀತಿಯ ದೂರುಗಳು ಬಾರದ ಹಾಗೆ ಕೆಲಸ ಮಾಡಬೇಕು ಮತ್ತು ತಾವು ಈ ರಸ್ತೆಯ ಬಗ್ಗೆ ವಿಶೇಷ ಮುತುವರ್ಜಿ ವಹಿಸುವಂತೆ ತಿಳಿಸಲಾಗಿದೆ ಎಂದರು.