ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ.
ಚಿಕ್ಕಮಗಳೂರು, (ಫೆ.17): ಜಿಲ್ಲೆಯ ಕುದುರೆಮುಖದ ಬಸರೀಕಲ್ ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದ ಘಟನೆ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ಬಸರೀಕಲ್ ಚೆಕ್ಪೋಸ್ಟ್ ಬಳಿ ಅರಣ್ಯ ಸಿಬ್ಬಂದಿ ಕುಳಿತುಕೊಳ್ಳುತ್ತಿದ್ದರು. ಈ ವೇಳೆ ಖಾಲಿ ಬಾಟಲಿಗೆ ಮರಳು ಮತ್ತು ಸೀಮೆ ಎಣ್ಣೆ ತುಂಬಿ ಬೆಂಕಿ ಹಚ್ಚಿ ಚೆಕ್ಪೋಸ್ಟ್ ಬಳಿ ಎಸೆದಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಆದ್ರೆ ಅಲ್ಲೇ ಇದ್ದ ರಿಜಿಸ್ಟರ್ ಪುಸ್ತಕಗಳು ಭಸ್ಮವಾಗಿವೆ. ಇದು ನಕ್ಸಲರ ಕೃತ್ಯ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
