Asianet Suvarna News Asianet Suvarna News

ಕಲಬುರಗಿ: ಕೆಲಸದಿಂದ ತೆಗೆದು ಹಾಕಲು ಯತ್ನ, ಆತ್ಮಹತ್ಯೆಗೆ ದಿವ್ಯಾಂಗ ವ್ಯಕ್ತಿ ಪ್ರಯತ್ನ

ಅಣವೀರಪ್ಪ ಗೌಡಗಾಂವ ಎಂಬುವರೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ತಕ್ಷಣವೇ ಪೊಲೀಸರು ಮತ್ತು ಸಹೋದ್ಯೋಗಿಗಳು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

Physical Disabled Person Attempt to Suicide in Kalaburagi grg
Author
First Published Sep 8, 2023, 11:00 PM IST

ಕಲಬುರಗಿ(ಸೆ.08):  ತನ್ನನ್ನು ಕೆಲಸದಿಂದ ತೆಗೆದು ಹಾಕಲು ಕೆಲವರು ನಿರತಂತರ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದಿವ್ಯಾಂಗ ವ್ಯಕ್ತಿಯೊಬ್ಬ ಜಿಲ್ಲಾಧಿಕಾರಿ ಕಚೇರಿ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ನಡೆದಿದೆ.

ಅಣವೀರಪ್ಪ ಗೌಡಗಾಂವ ಎಂಬುವರೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ತಕ್ಷಣವೇ ಪೊಲೀಸರು ಮತ್ತು ಸಹೋದ್ಯೋಗಿಗಳು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಲಬುರಗಿ: ಪ್ರೇಮ ವಿವಾಹಕ್ಕೆ ಯುವತಿ ಪೋಷಕರ ಅಡ್ಡಿ, ಯುವಕ ಆತ್ಮಹತ್ಯೆ

ಅಣವೀರಪ್ಪ ಅವರು ಅಫಜಲಪುರ ತಾಲೂಕಿನ ಉಡಚಣ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾಗಿ ಗೌರವ ಧನದ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ಕೆಲವರು ಅವರನ್ನು ಕೆಲಸದಿಂದ ತೆಗೆಯಲು ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us:
Download App:
  • android
  • ios