ಹುಬ್ಬಳ್ಳಿ(ಆ.16): ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸುಮಾರು ಒಂದೂವರೆ ಗಂಟೆ ಆಕಾಶದಲ್ಲಿ ಸುತ್ತಾಡಿದ್ದ ವಿಮಾನ ಸುರಕ್ಷಿತವಾಗಿ ಲ್ಯಾಂಡ್‌ ಅಗಿದೆ. ಹೀಗಾಗಿ ವಿಮಾನದಲ್ಲಿದ್ದ ಬಿಜೆಪಿಯ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿದಂತೆ 46 ಪ್ರಯಾಣಿಕರು ನಿರಾಳರಾಗಿದ್ದಾರೆ.

"

ಏರ್ ಇಂಡಿಗೋ ಸಂಸ್ಥೆಗೆ ಸೇರಿದ ವಿಮಾನ ಬೆಂಗಳೂರಿನಿಂದ ಹುಬ್ಬಳ್ಳಿಗೆ ನಿಲ್ದಾಣದಲ್ಲಿ ಇಂದು(ಭಾನುವಾರ) 8:55ಕ್ಕೆ ಲ್ಯಾಂಡ್ ಆಗಬೇಕಿತ್ತು. ಆದರೆ, ಹವಾಮಾನ ವೈಪರೀತ್ಯದಿಂದ 10:25ರವರೆಗೆ ಆಕಾಶದಲ್ಲೇ ಗಿರಕಿ ಹೊಡೆಯುತ್ತಿತ್ತು. ವಿಮಾನದ ಪೈಲಟ್ ಏರ್‌ ಟ್ರಾಫಿಕ್ ಕಂಟ್ರೋಲರ್ ಅನುಮತಿಗೆ ಕಾಯುತ್ತಿದ್ದರು. ಕೊನೆಗೆ ಅನುಮತಿ ಸಿಕ್ಕಿದ್ದರಿಂದ ಸುರಕ್ಷಿತವಾಗಿ ವಿಮಾನ ಲ್ಯಾಂಡ್‌ ಅಗಿದೆ.  

ಧಾರವಾಡ: ನವಲಗುಂದದಲ್ಲಿ ಯೂರಿಯಾ ಪಡೆಯಲು ರೈತರ ಮಾರಾಮಾರಿ

ವಿಮಾನ ಲ್ಯಾಂಡಿಂಗ್‌ಗೆ ಅವಕಾಶ ನೀಡಲು ಎಟಿಸಿ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ವಿಮಾನ ಆಕಾಶದಲ್ಲೇ ಸುತ್ತಾಡಿದೆ. ಇದರಿಂದ ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲ ಆತಂಕದಲ್ಲಿದ್ದರು, ಕೊನೆಗೆ ವಿಮಾನ ಲ್ಯಾಂಡಿಗ್‌ಗೆ ಎಟಿಸಿ ಅನುಮತಿ ನೀಡಿದ ಬಳಿಕ ವಿಮಾನ ಸುರಕ್ಷಿತವಾಗಿ ಲ್ಯಾಂಡ್‌ ಆಗಿದೆ.