ಕಾರವಾರ [ಜ.09]: ಮಕ್ಕಳಲ್ಲಿ ಏಕತೆಯ ಭಾವ ಮೂಡಿಸುವ ನಿಟ್ಟಿನಲ್ಲಿ ಅಂಗನವಾಡಿ ಮಕ್ಕಳಿಗೆ ಕೂಡ ಸಮವಸ್ತ್ರ ವಿತರಣೆಗೆ ಚಿಂತನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. 

ಕಾರವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಮೋದಿ ಪ್ರಧಾನಿಯಾದ ಮೇಲೆ ಭಾರತ ಸರ್ವಾಂಗೀಣ ಅಭಿವೃದ್ಧಿಯಾಗುತ್ತಿದೆ'...

ಇಂದಿನ ದಿನಮಾನಗಳಲ್ಲಿ ಪೋಷಕರು ತಮ್ಮ ಮಕ್ಕಳು ಶಿಸ್ತು ಮತ್ತು ಸಂಯಮದಿಂದ ಬೆಳೆಯಬೇಕೆಂಬ ಉದ್ದೇಶದಿಂದ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವುದರಿಂದ ಸರ್ಕಾರಿ ಶಾಲೆಗಳು ಬರಿದಾಗಿವೆ. ಅಂಗನವಾಡಿಗಳ ಹಂತದಿಂದಲೇ ಶಾಲೆಗಳನ್ನು ಸುಧಾರಿಸಿ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಆಕರ್ಷಿಸಬೇಕಾಗಿರುವುದು ಇಂದಿನ ಅಗತ್ಯವಾಗಿದೆ ಎಂದರು.