Asianet Suvarna News Asianet Suvarna News

Dharwad: ಪ್ಲಾಸ್ಟಿಕ್ ರೇಷನ್ ಅಕ್ಕಿಯೆಂದು ಭಯಗೊಂಡ ಗ್ರಾಮಸ್ಥರು: ಅಡುಗೆ ಮಾಡಲು ಭಯ ಪಡುತ್ತಿರುವ ಮಹಿಳೆಯರು

ಗ್ರಾಮೀಣ ಭಾಗದಲ್ಲಿ ಪ್ಲಾಸ್ಟಿಕ್ ರೇಷನ್ ಅಕ್ಕಿ ಬಂದಿದೆ ಗ್ರಾಮಸ್ಥರು ಭಯಗೊಂಡ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲಾಳ ಗ್ರಾಮದಲ್ಲಿ ನಡೆದಿದೆ. ಅಡುಗೆ ಮಾಡುವಾಗ ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಬಂದಿದೆ ಎಂದು ಗ್ರಾಮಸ್ಥರು ಗಾಬರಿಗೊಂಡಿದ್ದು, ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. 

plastic rice found in ration rice byalal in dharwad gvd
Author
First Published Jan 23, 2023, 12:56 PM IST

ಧಾರವಾಡ (ಜ.23): ಗ್ರಾಮೀಣ ಭಾಗದಲ್ಲಿ ಪ್ಲಾಸ್ಟಿಕ್ ರೇಷನ್ ಅಕ್ಕಿ ಬಂದಿದೆ ಗ್ರಾಮಸ್ಥರು ಭಯಗೊಂಡ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲಾಳ ಗ್ರಾಮದಲ್ಲಿ ನಡೆದಿದೆ. ಅಡುಗೆ ಮಾಡುವಾಗ ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಬಂದಿದೆ ಎಂದು ಗ್ರಾಮಸ್ಥರು ಗಾಬರಿಗೊಂಡಿದ್ದು, ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. 

ಇಡೀ ಗ್ರಾಮದಲ್ಲಿ ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಎಂದು ಅನ್ನವನ್ನ ಮಾಡಿ ತಿನ್ನಲು ಇದೀಗ ಗ್ರಾಮಸ್ಥರು ಹೆದರುತ್ತಿದ್ದಾರೆ. ಸದ್ಯ ಬ್ಯಾಲಾಳ ಗ್ರಾಮದಲ್ಲಿ 350 ರೇಷನ್ ಕಾರ್ಡ್‌ಗಳಿದ್ದು, ಎಲ್ಲ ಮನೆಯಲ್ಲಿ ಅಡುಗೆ ಮಾಡಲು ಮಹಿಳೆಯರು ಭಯ ಪಡುತ್ತಿರುವ ಸ್ಥಿತಿಯಲ್ಲಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರೇಷನ್ ಅಂಗಡಿಗೆ ಭೇಟಿ ನೀಡಿ, ರೇಷನ್ ಅಕ್ಕಿಯನ್ನ ಪರಿಶಿಲನೇ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಒಂದು ಪೈಸೆ ಲಂಚ ಪಡೆದಿದ್ದರೆ ರಾಜಕೀಯ ನಿವೃತ್ತಿ: ಸಿದ್ದು ಸವಾಲು

ಪ್ಲಾಸ್ಟಿಕ್‌ ಅಕ್ಕಿ ಎಂದು ಸಾರವರ್ಧಿತ ಅಕ್ಕಿ ಪಡೆಯಲು ಹಿಂದೇಟು: ನ್ಯಾ ಬೆಲೆ ಅಂಗಡಿಯಲ್ಲಿ ಸಾರವರ್ಧಿತ ಅಕ್ಕಿ ಪೂರೈಸಿದ್ದು, ಇದು ಪ್ಲಾಸ್ಟಿಕ್‌ ಅಕ್ಕಿ ಎಂದು ಫಲಾನುಭವಿಗಳು ಅಕ್ಕಿ ಪಡೆಯಲು ನಿರಾಕರಿಸಿದ ಘಟನೆ ನಡೆದಿದೆ. ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಾರವರ್ಧಿತ ಅಕ್ಕಿ ಎಂದು ತಿಳಿಸಿ ಗೊಂದಲ ದೂರ ಮಾಡಿದರು. ಸರ್ಕಾರದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ವಿತರಣೆ ಮಾಡುವ ಪಡಿತರದಲ್ಲಿ ಪ್ಲಾಸ್ಟಿಕ್‌ ಅಕ್ಕಿ ಬಂದಿದೆ ಎಂಬ ತಪ್ಪು ಮಾಹಿತಿ ಮತ್ತು ಮಾಹಿತಿ ಕೊರತೆಯಿಂದ ಪಡಿತರ ಫಲಾನುಭವಿಗಳು ಆತಂಕಕ್ಕೀಡಾಗಿದ್ದರು.

ಪಡಿತರ ಅಕ್ಕಿಯಲ್ಲಿ ಸೌತೆ ಬೀಜದಂತಹ ಅಕ್ಕಿ ಕಂಡುಬಂದ ಹಿನ್ನೆಲೆ ಇದು ಪ್ಲಾಸ್ಟಿಕ್‌ ಅಕ್ಕಿಯೇ ಎಂಬ ಗುಮಾನಿ ಹರಡಿ ಪಡಿತರ ಪಡೆಯಲು ಸಾಲುಗಟ್ಟಿನಿಂತ ಫಲಾನುಭವಿಗಳು ಪರಸ್ಪರ ಆತಂಕದಿಂದ ಮಾತನಾಡಿಕೊಳ್ಳುತ್ತ ನ್ಯಾಯಬೆಲೆ ಅಂಗಡಿಯವರಿಗೆ ನಮಗೆ ಈ ಅಕ್ಕಿ ಬೇಡ ಎಂದು ನಿರಾಕರಿಸಿದ ಪ್ರಸಂಗ ನಡೆಯಿತು. ಈ ಸುದ್ದಿ ತಿಳಿದ ಆಹಾರ ನಿರೀಕ್ಷಕ ಜಗದೀಶ ಕುರುಬರ ಹಾಗೂ ಮಂಜುಳಾ ಆಕಳದ ಸ್ಥಳಕ್ಕೆ ಆಗಮಿಸಿ ಮಾಹಿತಿ ನೀಡಿ, ಜನಸಾಮಾನ್ಯರಲ್ಲಿನ ಅಪೌಷ್ಟಿಕತೆ ಹೋಗಲಾಡಿಸಿ ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಸಾರಯುಕ್ತ ಅಕ್ಕಿ ವಿತರಣೆ ಮಾಡುತ್ತಿದೆ. 

ಪ್ರತಿ 50 ಕೆಜಿ ಅಕ್ಕಿಯ ಚೀಲದಲ್ಲಿ ಅರ್ಧ ಕೆಜಿಯಷ್ಟು ಪೋಷಕಾಂಶ (ವಿಟಾಮಿನ್‌ ಎ ಮತ್ತು ಡಿ ಐರನ್‌, ಫೋಲಿಕ್‌ ಆಸಿಡ್‌, ಬಿ ಕಾಂಪ್ಲೆಕ್ಸ್‌, ಜಿಂಕ್‌ ಹಾಗೂ ಐಯೋಡಿನ್‌) ಭರಿತ ಸಾರವರ್ಧಿತ ಅಕ್ಕಿ ಬೆರೆಸಿ ವಿತರಣೆ ಮಾಡಲಾಗುತ್ತಿದೆ. ಸಾರವರ್ಧಿತಗೊಳಿಸಿರುವ (ಪೋರ್ಟಿಫೈಡ್‌) ಅಕ್ಕಿಯಲ್ಲಿ ಕೆಲವೊಂದು ಅಕ್ಕಿಯ ಕಾಳುಗಳು ನೆನೆದು ಉಬ್ಬಿದ ರೀತಿಯಲ್ಲಿರುವುದು ಆತಂಕ ಮೂಡಿಸುತ್ತದೆ. ಆದರೆ, ಇದು ರಕ್ತ ಹೀನತೆ, ಅಪೌಷ್ಟಿಕತೆ ನಿವಾರಣೆ, ಮಧುಮೇಹ, ಬಿಪಿಯಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಗರ್ಭಿಣಿಯರಿಗೆ, ಬಾಣಂತಿಯರಿಗೆ, ಚಿಕ್ಕಮಕ್ಕಳಿಗೆ ಈ ಪಡಿತರ ಅಕ್ಕಿ ಪೌಷ್ಟಿಕತೆಯನ್ನು ಹೆಚ್ಚಿಸುತ್ತದೆ. 

ಬಿಜೆಪಿಗರು ಬೊಮ್ಮಾಯಿ ಬಿಟ್ಟು ಮೋದಿ ಮುಖ ತೋರಿಸ್ತಿದ್ದಾರೆ: ಡಿ.ಕೆ.ಶಿವಕುಮಾರ್‌

ಜೊತೆಗೆ ದೇಹವನ್ನು ತಂಪಾಗಿಡುತ್ತದೆ. ಆದ್ದರಿಂದ ಯಾರೂ ಆತಂಕಕ್ಕೀಡಾಬಾರದು. ಈ ಬಗ್ಗೆ ನ್ಯಾಯಬೆಲೆ ಅಂಗಡಿಯವರಿಗೆ ಮತ್ತು ಫಲಾನುಭವಿಗಳಿಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಈ ವೇಳೆ ಮಾತನಾಡಿದ ಪಡಿತರ ಫಲಾನುಭವಿಗಳು ಈ ಹಿಂದೆ ಅನ್ನಭಾಗ್ಯ ಅಕ್ಕಿಯಲ್ಲಿ ಪಾಸ್ಟಿಕ್‌ ಅಕ್ಕಿ ಬರುತ್ತದೆ ಎಂಬ ಸುದ್ದಿ ಈಗಲೂ ಜನರ ಮನಸ್ಸಿನಲ್ಲಿ ಉಳಿದಿದೆ. ಇಂತಹ ಸಂದರ್ಭದಲ್ಲಿ ಅಕ್ಕಿಯಲ್ಲಿ ಪೌಷ್ಟಿಕಾಂಶದ ಅಕ್ಕಿ ಸೇರಿಸಲಾಗಿದೆ ಎಂಬ ಮಾಹಿತಿ ನೀಡದೇ ಇರುವುದು ನಮ್ಮಲ್ಲಿ ಆತಂಕ, ಗಾಬರಿ ಮೂಡಿಸಿದೆ. ಈ ಬಗ್ಗೆ ಇಲಾಖೆಯವರು ಪ್ರತಿ ನ್ಯಾಯಬೆಲೆ ಅಂಗಡಿಯವರಿಗೆ ಮತ್ತು ಪಡಿತರ ಫಲಾನುಭವಿಗಳಿಗೆ ಮಾಹಿತಿ ನೀಡಬೇಕು ಎಂದು ಮಂಜುನಾಥ ಗೊರವರ, ಲಕ್ಷ್ಮವ್ವ ಹಳ್ಳಿಕೇರಿ ಅಭಿಪ್ರಾಯ ವ್ಯಕ್ತಪಡಿಸಿದರು.

Follow Us:
Download App:
  • android
  • ios