ಮೈಸೂರು ತಾಲೂಕಿನಲ್ಲಿ ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಇ-ಕೆವೈಸಿ ಮಾಡಿಸದ ರೈತರಿಗೆ ಪ್ರೋತ್ಸಾಹಧನ ತಡೆಹಿಡಿಯಲಾಗುವುದು. ರೈತರು ಕೂಡಲೇ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು.
ಮೈಸೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ(ಪಿಎಂಕಿಸಾನ್) ಯೋಜನೆಯ 24ನೇ ಕಂತಿನ ಹಣವನ್ನು ಪಡೆಯಲು ಬಯೋಮೆಟ್ರಿಕ್ ಇ-ಕೆ.ವೈ.ಸಿ ಮಾಡಿಸುವುದು ಕಡ್ಡಾಯವಾಗಿದೆ. ಪಿ.ಎಂ. ಕಿಸಾನ್ ಯೋಜನೆಯಡಿ ಫಲಾನುಭವಿ ರೈತರಿಗೆ ಅ. 30ರಂದು ಕೇಂದ್ರ ಸರ್ಕಾರದಿಂದ 24ನೇ ಕಂತಿನ ಹಣ ಬಿಡುಗಡೆಯಾಗುತ್ತಿದೆ. ಇನ್ನು ಮುಂದೆ ಪ್ರತಿ ವರ್ಷವೂ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯಗೊಳಿಸಲಾಗಿದೆ.
ಪಿಎಂ ಕಿಸಾನ್ ಮೊಬೈಲ್ ಆಪ್ ನಲ್ಲಿಯೂ ಇ- ಕೆವೈಸಿ ಮಾಡಿ
ಈ ಯೋಜನೆಯಡಿ ಮೈಸೂರು ತಾಲೂಕಿನಲ್ಲಿ ಸುಮಾರು 12,467 ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳದೆ ಬಾಕಿ ಉಳಿದಿದ್ದು, ಇದರಲ್ಲಿ ಇಲವಾಲ ಹೋಬಳಿಯ 3496, ಜಯಪುರ ಹೋಬಳಿಯ 4758, ಕಸಬಾ ಹೋಬಳಿಯ 1171 ಹಾಗೂ ವರುಣ ಹೋಬಳಿಯ 3042 ಬಾಕಿ ಇದೆ.
ಫಲಾನುಭವಿಗಳು ತಮ್ಮ ಆಧಾರ್ ಮತ್ತು ಆಧಾರ್ ಜೋಡಣೆ ಆಗಿರುವ ಮೊಬೈಲ್ ನಂಬರ್ ನೊಂದಿಗೆ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್, ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಪಿಎಂ ಕಿಸಾನ್ ಮೊಬೈಲ್ ಆಪ್ ನಲ್ಲಿಯೂ ಇ- ಕೆವೈಸಿ ಮಾಡಿಕೊಳ್ಳಬಹುದು.
ವಾರ್ಷಿಕ ಬಯೋಮೆಟ್ರಿಕ್ ಇ-ಕೆವೈಸಿ ಕಡ್ಡಾಯ
ಇ-ಕೆವೈಸಿ ಮಾಡಿಸದ ಫಲಾನುಭವಿಗಳಿಗೆ ಪ್ರೊತ್ಸಾಹಧನ ತಡೆ ಹಿಡಿಯಲಾಗುವುದು. ಆದ್ದರಿಂದ ಕೂಡಲೇ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಯೋಜನೆಯಡಿ ಸೌಲಭ್ಯ ಪಡೆಯಲು ವಾರ್ಷಿಕ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಲು ಬಾಕಿ ಇರುವ ರೈತರು ಈ ಕೂಡಲೇ ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ / ಸಾಮಾನ್ಯ ಸೇವಾ ಕೇಂದ್ರಗಳನ್ನು ಸಂಪರ್ಕಿಸಿ ವಾರ್ಷಿಕ ಬಯೋಮೆಟ್ರಿಕ್ ಇ-ಕೆವೈಸಿ ಕಡ್ಡಾಯ ಮಾಡಿಸಬೇಕು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






