Asianet Suvarna News Asianet Suvarna News

'ರೈತರಿಗೆ ಅನ್ಯಾಯವಾಗಲು ಮೋದಿ, ಬಿಎಸ್‌ವೈ ಬಿಡಲ್ಲ'

ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಿ ಎಸ್ ಯಡಿಯೂರಪ್ಪ ಎಂದಿಗೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಚಿವ ಸೋಮಶೇಖರ್ ಹೇಳಿದ್ದಾರೆ.

PM Modi BSY always Supports Farmers Says Minister ST Somashekar snr
Author
Bengaluru, First Published Sep 28, 2020, 7:45 AM IST

ಮೈಸೂರು (ಸೆ.28): ನರೇಂದ್ರ ಮೋದಿ ನೇತೃತ್ವದ ಕೇಂದ್ರ ಹಾಗೂ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಗಳು ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿ​ದ್ದಾರೆ. 

ಎಪಿಎಂಸಿ ಹಾಗೂ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾದ ಮೇಲೆಯೇ ಒಪ್ಪಿಗೆ ಪಡೆಯಲಾಗಿದೆ. ಅಲ್ಲದೇ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ತೊಂದರೆಯಾಗುವ ಯಾವ ಕಾಯ್ದೆಯನ್ನೂ ಮಾಡಿಲ್ಲ. 

ಒಂದು ವೇಳೆ ರೈತರಿಗೆ ಅನ್ಯಾಯವಾಗುವುದಿದ್ದರೆ ರೈತ ನಾಯಕರಾಗಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೇ ಒಪ್ಪಿಕೊಳ್ಳುತ್ತಿರಲಿಲ್ಲ ಎಂದಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸೆ.26ಕ್ಕೆ ಕರೆದಿದ್ದ ಸಭೆಯನ್ನು 28ಕ್ಕೆ ನಡೆಸಲು ಸೂಚಿಸಲಾಗಿತ್ತು. ಆದರೆ, ಅಂದು ರೈತರ ಪ್ರತಿಭಟನೆ ಇರುವುದರಿಂದ ಇನ್ನೊಂದು ದಿನಕ್ಕೆ ಮುಂದೂಡಲಾಗಿದೆ ಎಂದಿದ್ದಾರೆ.

ಕರ್ನಾಟಕ ಬಂದ್: ಯಾವ ಜಿಲ್ಲೆಯಲ್ಲಿ ಹೇಗಿದೆ ಪರಿಸ್ಥಿತಿ? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಭೂ ಸುಧಾರಣಾ ಕಾಯ್ದೆ ಜಾರಿಗೆ ತಂದಿದ್ದು, ಈ ಕಾಯ್ದೆ ವಿರುದ್ಧ ರೈತರು ಅಸಮಾಧಾನ ಹೊರ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ಈ ಕಾಯ್ದೆ ವಿರೋಧಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಿದೆ.

Follow Us:
Download App:
  • android
  • ios