ನರೇಂದ್ರ ಮೋದಿ ಆಹ್ವಾನದ ಮೇರೆಗೆ ದೆಹಲಿಯತ್ತ ಪೇಜಾವರ ಶ್ರೀಗಳು
ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನಕ್ಕೆ ಪೇಜಾವರ ಶ್ರೀಗಳಿಗೆ ಆಹ್ವಾನ|| ಪೇಜಾವರ ಮಠದ ವಿಶ್ವೇಶ ತೀರ್ಥರಿಗೆ ಪ್ರಧಾನಿ ಕಚೇರಿಯಿಂದ ಆಹ್ವಾನ| ಮಂಗಳೂರಿಂದ ಇಂದೇ ದೆಹಲಿಗೆ ತೆರಳಲಿರುವ ಪೇಜಾವರ ಸ್ವಾಮೀಜಿ|
ಉಡುಪಿ, (ಮೇ.28): ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಆಹ್ವಾನ ಬಂದಿದೆ.
ನಾಳೆ ಅಂದರೆ ಮೇ 30 ರಂದು ನರೇಂದ್ರ ಮೋದಿ ಅವರು 2ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ಕಚೇರಿಯಿಂದ ಪೆಜಾವರ ಶ್ರೀಗಳಿಗೆ ಆಹ್ವಾನ ಬಂದಿದೆ.
ಸಿಎಂ ಎಚ್.ಡಿ ಕುಮಾರಸ್ವಾಮಿಗೆ ನರೇಂದ್ರ ಮೋದಿ ಆಹ್ವಾನ
ಈ ಹಿನ್ನೆಲೆಯಲ್ಲಿ ವಿಶ್ವೇಶತೀರ್ಥ ಸ್ವಾಮೀಜಿ ಇಂದು (ಬುಧವಾರ) ಮಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ. ಇನ್ನು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಆಹ್ವಾನ ಬಂದಿದ್ದು, ಗುರುವಾರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ..
ಗುರುವಾರ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನ ಮುಂಭಾಗ ನರೇಂದ್ರ ಮೋದಿ ಅವರು ಪ್ರತಿಜ್ಞೆ ಸ್ವೀಕಾರ ಮಾಡಲಿದ್ಧಾರೆ. ಈ ಬಾರಿ ದರ್ಬಾರ್ ಹಾಲ್ ಬದಲು ಫೋರ್ಕೋರ್ಟ್ನಲ್ಲಿ ಸಮಾರಂಭ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ದೇಶ-ವಿದೇಶದ ಸುಮಾರು 6,500 ಗಣ್ಯ ಅತಿಥಿಗಳ ಹಾಜರಾಗುವ ಸಾಧ್ಯತೆ ಇದೆ.