ಬೆಳಗಾವಿ[ಅ. 01] ಉತ್ತರ ‌ಭಾರತದಲ್ಲಿ ಭೀಕರ ಪ್ರವಾಹಕ್ಕೆಕಾಳಜಿ ವ್ಯಕ್ತಪಡಿಸಿ ಪ್ರಧಾನಿ ಟ್ವೀಟ್ ಮಾಡಿರುವುದಕ್ಕೆ ಸಂಬಂಧಿಸಿ ಬಿಜೆಪಿಯ  ಇಬ್ಬರು ಪ್ರಮುಖ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರನ್ನು ಸರ್ಮರ್ಥಿಸಿಕೊಳ್ಳುವ ಭರದಲ್ಲಿ ಕೇಂದ್ರ ಸಚಿವ ಸುರೇಶ ಅಂಗಡಿ ಉಡಾಫೆಯ ಉತ್ತರ ನೀಡಿದ್ದಾರೆ.

ಉತ್ತರ ಕರ್ನಾಟಕ ಭಾಗದ ಪ್ರವಾಹದ ವೇಳೆ ಮೋದಿ ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿ ಆಗಿದ್ದರು. ಹೀಗಾಗಿ ಪ್ರವಾಹದ ಕುರಿತು ಪ್ರಧಾನಿ ಮೋದಿ ಅವರಿಗೆ ಟ್ವೀಟ್ ಮಾಡಲು ಸಾಧ್ಯವಾಗಿಲ್ಲ. ಗೃಹಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ‌ನ್ ರಾಜ್ಯದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಕೇಂದ್ರ ತಂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ‌ ನೀಡಿ ವರದಿ ನೀಡಿದೆ.

'ಬಿಹಾರಕ್ಕೆ ಮಿಡಿದ ಮೋದಿ 52 ಇಂಚಿನ ಎದೆ, ಕರ್ನಾಟಕ ವಿಚಾರದಲ್ಲಿ ಕಲ್ಲುಬಂಡೆ ಆಗಿದ್ದೇಕೆ?'

ಕೇಂದ್ರದ ಎನ್ ಡಿ ಆರ್ ಎಫ್ ಅನುದಾನ ಡಿಸಿ ಅಕೌಂಟ್ ನಲ್ಲಿದೆ. ಪ್ರವಾಹದ ಪುನರ್ವಸತಿ ಕೆಲಸ ಸಮರೋಪಾದಿಯಲ್ಲಿ ಸಾಗಿದೆ ಎಂದು ಅಂಗಡಿ  ಹೇಳಿದ್ದಾರೆ.

ಇನ್ನು ಈ ಬಗ್ಗೆ  ಬೆಳಗಾವಿಯಲ್ಲಿ ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು ಅಮೇರಿಕಾದ ಹೌಡಿ ಮೋದಿ ಕಾರ್ಯಕ್ರಮದಲ್ಲೇ ಪ್ರಧಾನಿ ಕನ್ನಡದಲ್ಲಿ ಮಾತನಾಡಿದ್ದಾರೆ. ಕರ್ನಾಟಕದ ಪ್ರವಾಹದ ಸಂದರ್ಭದಲ್ಲಿ ಟ್ವೀಟ್ ಮಾಡದಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ.