ಮೋದಿ ಆಗಮನ ಹಿನ್ನೆಲೆ : ಬೆಂಗಳೂರಿನ ಈ ರಸ್ತೆಗಳ ಸಂಚಾರ ಬಂದ್
ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಹಲವು ಮಾರ್ಗಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.
ಬೆಂಗಳೂರು [ಜ.03]: ರಾಷ್ಟ್ರದಲ್ಲಿ ವಿಜ್ಞಾನದ ಅಭಿವೃದ್ಧಿಗೆ ಉತ್ತೇಜನ ನೀಡುವ ಸಂಬಂಧ ನಗರದಲ್ಲಿ ಆಯೋಜಿಸಿರುವ ಪ್ರತಿಷ್ಠಿತ 107ನೇ ‘ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನ’ವನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಐದು ದಿನಗಳ ವಿಜ್ಞಾನ ಜಾತ್ರೆಗೆ ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣವು ಸಕಲ ರೀತಿಯಲ್ಲಿ ಸಜ್ಜಾಗಿದೆ.
ಮೋದಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಮಾರ್ಗದಲ್ಲಿ ಶುಕ್ರವಾರ ಸಂಚಾರ ವ್ಯವಸ್ಥೆ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಕೋರಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ವಿಮಾನ ನಿಲ್ದಾಣ ರಸ್ತೆಯ ಜಿಕೆವಿಕೆ ಆವರಣದಲ್ಲಿ ಆಯೋಜಿಸಲಾಗಿರುವ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊರ ದೇಶದ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏರ್ಪೋರ್ಟ್‌ಗೆ ಹೀಗೆ ತಲುಪಿ
* ಹೆಬ್ಬಾಳ ಮೇಲ್ಸೇತುವೆಯಲ್ಲಿ ಬಲ ತಿರುವು ಪಡೆದು ರೇವಾ ಕಾಲೇಜ್ ಜಂಕ್ಷನ್ ಮೂಲಕ ಬಾಗಲೂರು ಹಾದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಬಹುದು
* ಮೇಖ್ರಿ ಸರ್ಕಲ್‌ನಲ್ಲಿ ಬಲ ತಿರುವು ಪಡೆದು ಎಂ.ಎಸ್.ಪಾಳ್ಯ ಮೂಲಕ ಯಲಹಂಕದ ಕೋಗಿಲು ಕ್ರಾಸ್ ದಾಟಿ ವಿಮಾನ ನಿಲ್ದಾಣ ಕಡೆ ಸಾಗಬಹುದು
ವಾಹನ ನಿಲುಗಡೆ ನಿಷೇಧ
* ಬಳ್ಳಾರಿ ರಸ್ತೆ ಮತ್ತು ಜಿಕೆವಿಕೆ ಆವರಣದ ಮುಖ್ಯರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ
* ಗಣ್ಯರು, ಸರ್ಕಾರಿ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳ ವಾಹನಗಳ ನಿಲುಗಡೆಗೆ ಕೃಷಿ ಮೇಳ ನಡೆಯುವ ಜಾಗದಲ್ಲಿ ಅವಕಾಶ ಕಲ್ಪಿಸಲಾಗಿದೆ
ರೈತ ದರ್ಶನ ನನ್ನ ಸೌಭಾಗ್ಯ: ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿದ ಮೋದಿ!...