ಹುಬ್ಬಳ್ಳಿಗೆ ನಾಳೆ ಪ್ರಧಾನಿ ಮೋದಿ: ಯುವಜನ ಉತ್ಸವಕ್ಕೆ ಚಾಲನೆ

ಯುವ ಜನೋತ್ಸವದಲ್ಲಿ 28 ರಾಜ್ಯಗಳಿಂದ ಯುವಕರ ತಂಡ ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ ಪ್ರತಿನಿಧಿಗಳು ಬರುತ್ತಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಒಂದು ವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳು ನಡೆಯಲಿವೆ. ಪ್ರಥಮ ಬಾರಿಗೆ ರಾಷ್ಟ್ರೀಯ ಯುವಜನ ಮೇಳ ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವುದು ನಮಗೆಲ್ಲ ಸಂತಸವನ್ನುಂಟು ಮಾಡಿದೆ: ಸಿಎಂ ಬೊಮ್ಮಾಯಿ 

PM Narendra Modi Will Be Drive to National Youth Festival in Dharwad grg

ಹುಬ್ಬಳ್ಳಿ(ಜ.11):  ಧಾರವಾಡದಲ್ಲಿ ಜ.12ರಿಂದ 16ರ ವರೆಗೆ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದೆ. 12ಕ್ಕೆ ಪ್ರಧಾನಿ ಮೋದಿ ಇಲ್ಲಿನ ರೈಲ್ವೆ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಈ ಭಾಗದ ಯುವಕರಿಗೆ ಪ್ರೇರಣೆ ನೀಡುವ ಜನೋತ್ಸವ ಇದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಧ್ಯಮಗಳೊಂದಿಗೆ ಮಂಗಳವಾರ ಮಾತನಾಡಿ, ಯುವ ಜನೋತ್ಸವದಲ್ಲಿ 28 ರಾಜ್ಯಗಳಿಂದ ಯುವಕರ ತಂಡ ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ ಪ್ರತಿನಿಧಿಗಳು ಬರುತ್ತಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಒಂದು ವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳು ನಡೆಯಲಿವೆ. ಪ್ರಥಮ ಬಾರಿಗೆ ರಾಷ್ಟ್ರೀಯ ಯುವಜನ ಮೇಳ ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವುದು ನಮಗೆಲ್ಲ ಸಂತಸವನ್ನುಂಟು ಮಾಡಿದೆ. ಎಲ್ಲ ರಂಗದಲ್ಲಿ ಯುವಕರು ಮುಂದೆ ಬರಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.

ಮಹದಾಯಿ ಬಗ್ಗೆ ಕೇಂದ್ರದ ಪ್ರಶ್ನೆಗೆ ಉತ್ತರ ನೀಡ್ತೇವೆ: ಸಿಎಂ ಬೊಮ್ಮಾಯಿ

ಜನಸಂಖ್ಯೆ ನಮ್ಮ ಆಸ್ತಿ: 

ಜನಸಂಖ್ಯೆ ಎನ್ನುವುದು ಭಾರತವಲ್ಲ. ಇದು ನಮ್ಮ ಆಸ್ತಿ ಎಂದು ಪ್ರಧಾನಿಗಳು ಪರಿಗಣಿಸಿದ್ದಾರೆ. ಶೇ.46ರಷ್ಟುಯುವ ಜನರಿರುವ ದೇಶದಲ್ಲಿ ಯುವಕರಿಂದಲೇ ದೇಶದ ಭವಿಷ್ಯ ನಿರ್ಮಿಸಬಹುದು ಎಂದು ಹಲವಾರು ಕಾರ್ಯಕ್ರಮಗಳು ರೂಪಿಸಲಾಗಿದೆ. ನೂತನ ಶಿಕ್ಷಣ ನೀತಿ, ಮುದ್ರಾ, ಆತ್ಮನಿರ್ಭರ ಭಾರತದಂಥ ಕಾರ್ಯಕ್ರಮ ರೂಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿಗಳ ಆಗಮನದಿಂದ ಯುವ ಸಮೂಹಕ್ಕೆ ಸ್ಫೂರ್ತಿ ದೊರೆಯಲಿದೆ. ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೋದಿ ಅವರ ರೋಡ್‌ ಶೋ ಇಲ್ಲ. ಆದರೆ ಮೋದಿ ಆಗಮನದ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ನಿಲ್ಲಲು ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಪ್ರಧಾನಿಗಳು ಅದಕ್ಕೆ ಸ್ಪಂದಿಸುತ್ತಾರೆ ಎಂದರು.

Latest Videos
Follow Us:
Download App:
  • android
  • ios