ಕೋಲಾರ: ಕಾಯ್ದೆ ಇದ್ದರೂ ಪೋಕ್ಸೊ ಪ್ರಕರಣಗಳು ಹೆಚ್ಚಳ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಕೀಲರ ಸಂಘದಿಂದ ಪೋಕ್ಸೊ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಸರ್ಕಾರಿ ಬಾಲಕಿಯ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕೋಲಾರ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಕೀಲರ ಸಂಘದಿಂದ ಪೋಕ್ಸೊ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಸರ್ಕಾರಿ ಬಾಲಕಿಯ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ್ ಎಸ್. ಹೊಸಮನಿ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.
ಕಾನೂನುಗಳಡಿ ಜೀವನ
ಮನುಷ್ಯ ಹುಟ್ಟುವ ಪೂರ್ವದಲ್ಲಿ ಕಾನೂನುಗಳನ್ನು ಪ್ರಾರಂಭವಾಗಿ ಅವನು ಮೃತಪಡುವವರಗೆ ಕಾನೂನು ಅಡಿಯಲ್ಲಿ ಜೀವನ ಮಾಡಬೇಕಾಗುತ್ತದೆ. ಭಾರತ ಸಂವಿಧಾನ ಪೀಠಿಕೆಯಲ್ಲಿ ಹೇಳಿದ ಸಾಮಾಜಿಕ ರಾಜಕೀಯ ಮತ್ತು ಆರ್ಥಿಕ ನ್ಯಾಯವನ್ನು ಪ್ರತಿಯೊಬ್ಬರಿಗೂ ಕಲ್ಪಿಸುವುದು ಅವಶ್ಯ. ಆ ನಿಟ್ಟಿನಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಕಾಯ್ದೆ ಜಾರಿಗೆ ತಂದು ಅದರ ಮೂಲಕ ಎಲ್ಲರಿಗೂ ಉಚಿತ ಕಾನೂನು ಅರಿವನ್ನು ಮತ್ತು ಅರ್ಹರಿರುವರಿಗೆ ನೆರವನ್ನು ಒದಗಿಸುವ ಉದ್ದೇಶದಿಂದ ಕಾನೂನು ಸೇವೆಗಳ ಪ್ರಾಧಿಕಾರ ರಚನೆ ಮಾಡಲಾಗಿದೆ.
ಪೋಕ್ಸೊ ಪ್ರಕರಣಗಳು ಹೆಚ್ಚಳ
ಇತ್ತೀಚೆಗೆ ಮಕ್ಕಳ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು ಅದನ್ನು ತಡೆಗಟ್ಟುವುದು ಎಲ್ಲರ ಕರ್ತವ್ಯವಾಗಿದೆ. ೨೦೧೨ ರಲ್ಲಿ ಪೋಕ್ಸೊ ಕಾಯ್ದೆ ಜಾರಿಗೆ ಬಂದಿದ್ದರೂ ಪೋಕ್ಸೊ ಪ್ರಕರಣಗಳು ಹೆಚ್ಚಾಗುತ್ತಿವೆ. ಸದರಿ ಪೋಕ್ಸೊ ಕಾಯ್ದೆ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಶಾಲಾ, ಕಾಲೇಜುಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಅಷ್ಟೇ ಅಲ್ಲದೆ 2009 ರಲ್ಲಿ ಬಾಲ್ಯ ವಿವಾಹ ಕಾಯ್ದೆ ಜಾರಿಗೆ ಬಂದಿದ್ದು, ಅದರ ಬಗ್ಗೆ ಹಲವಾರು ಜನರಿಗೆ ಅರಿವು ಇರುವುದಿಲ್ಲ, ಇತ್ತೀಚೆಗೆ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿದ್ದು ಅದನ್ನು ತಡೆಗಟ್ಟುವುದು ಎಲ್ಲರ ಕರ್ತವ್ಯವಾಗಿದೆ. ಈ ಇಲಾಖೆಗಳ ವತಿಯಿಂದ ಶಾಲೆಗಳು, ಕಾಲೇಜುಗಳಲ್ಲಿ ಮತ್ತು ಹಳ್ಳಿಗಳಲ್ಲಿ ಬಾಲ್ಯ ವಿವಾಹ ತಡೆ ಕಾಯ್ದೆ ಬಗ್ಗೆ ಅರಿವನ್ನು ಉಂಟು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನಾಗರತ್ನಮ್ಮ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಇದ್ದರು.
ಬಾಲಕಿ ಮೇಲೆ ಅತ್ಯಾಚಾರ : 20 ವರ್ಷ ಶಿಕ್ಷೆ
ಕೋಲಾರ(ಆ.09): ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಕೆಜಿಎಫ್ ತಾಲೂಕಿನ ಎಸ್.ಪ್ರವೀಣ್(20) ಎಂಬುವನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ಕೃತ್ಯಕ್ಕೆ ಸಹಕರಿಸಿದ ಮಂಜುನಾಥ್ (35) ಎಂಬ ವ್ಯಕ್ತಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದರ ಸಂಬಂಧ 2021ರ ಡಿಸೆಂಬರ್ 25ರಂದು ಬೇತಮಂಗಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಪಿ.ದೇವಮಾನೆ ಅವರು ಮಂಗಳವಾರ ಅಪರಾಧಿ ಪ್ರವೀಣ್ ಎಂಬಾತನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ತಲಾ 70 ಸಾವಿರ ರೂ. ದಂಡ ವಿಧಿಸಿದ್ದಾರೆ.
ಅಪ್ತಾಪ್ತೆ ಮೇಲೆ ರೇಪ್, ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮತ್ತೆ ಸಮೂಹಿಕ ಅತ್ಯಾಚಾರ!
ಮಂಜುನಾಥ್ ಎಂಬಾತನಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದ್ದಾರೆ. ಜೊತೆಗೆ ಬಾಲಕಿಗೆ 5 ಲಕ್ಷ ರೂ. ಪರಿಹಾರ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ. ಲಲಿತಕುಮಾರಿ ವಾದ ಮಂಡಿಸಿದ್ದರು.