ದೇಶದಲ್ಲಿ ಹಲವೆಡೆ ಉಗ್ರ ದಾಳಿ ಸಾಧ್ಯತೆ ಇದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಹಲವೆಡೆ ಈಗಾಗಲೇ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಶಿವಮೊಗ್ಗದಲ್ಲಿಯೂ ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗ(ಆ.18): ದೇಶದಲ್ಲಿ ಹಲವೆಡೆ ಉಗ್ರ ದಾಳಿ ಸಾಧ್ಯತೆ ಇದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಹಲವೆಡೆ ಈಗಾಗಲೇ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಶಿವಮೊಗ್ಗದಲ್ಲಿಯೂ ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿ ಪರಿಶೀಲನೆ ನಡೆಸಿದ್ದಾರೆ.
Add Asianetnews Kannada as a Preferred Source

ದೇಶದೊಳಕ್ಕೆ ಉಗ್ರರು ನುಗ್ಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಮುಖ ಜಲಾಶಯಗಳಾದ ಭದ್ರಾ, ಲಿಂಗನಮಕ್ಕಿ, ತುಂಗಾ, ವರಾಹಿ ಸೇರಿದಂತೆ ಪ್ರಮುಖ ಜಲಾಶಯದಲ್ಲಿ ಬೆಚ್ಚಿನ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ.
ಉಗ್ರರ ಹಾವಳಿ, ಇಡೀ ಕರ್ನಾಟಕಕ್ಕೆ ಮುನ್ನೆಚ್ಚರಿಕೆ: ಜೋಪಾನ
ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಅಲ್ಲದೆ ನಗರದ ಲಾಡ್ಜ್‌ಗಳಲ್ಲಿ ತಂಗುವ ವ್ಯಕ್ತಿಗಳ ಬಗ್ಗೆಯೂ ತೀವ್ರ ನಿಗಾ ವಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
