ತುಮಕೂರು:(ಸೆ.25) ಕರ್ತವ್ಯನಿರತ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದಲ್ಲಿ ನಡೆದಿದೆ.


ಎಚ್.ಸಿ ದೊಡ್ಡಯ್ಯ(45) ಎಂಬುವರೆ ಸಾವನ್ನಪ್ಪಿದ ಪೊಲೀಸ್ ಪೇದೆಯಾಗಿದ್ದಾರೆ. ಮೃತ ದೊಡ್ಡಯ್ಯ ಅವರು ತಾಲೂಕಿನ ದೊಡ್ಡರಾಂಪುರ ಜಾತ್ರಗೆ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಜಾತ್ರೆಯ ನಿಮಿತ್ತ ಕರ್ತವ್ಯದಲ್ಲಿದ್ದಾಗಲೇ ದೊಡ್ಡಯ್ಯ ಅವರು ತೀವ್ರತರವಾದ ಎದೆನೋವಿನಿಂದ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು, ಆದರೆ, ದೊಡ್ಡಯ್ಯ ಅವರು ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಹುಳಿಯಾರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 


ಯಾವ ಸಮಾಯಾದಲ್ಲಾದರೂ ಸಾವು ಎದುರಾಗಬಹುದು ಎಂಬುದಕ್ಕೆ ಈ ಘಟನೆ ತಾಜಾ ಉದಾಹರಣೆಯಾಗಿದೆ.