ದರೋಜಿಯ ಸುಮತಿ ಅವರನ್ನು ವರಿಸಿದ ಪೇದೆ ರಾಮಚಂದ್ರ| ಕೊರೋನಾ ಭೀತಿ ಹಿನ್ನೆಲೆಯಲ್ಲಿ ನಡೆದ ಸರಳ ವಿವಾಹ| ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ಶ್ರೀ ಕಲ್ಲೇಶ್ವರ ದೇವಸ್ಥಾನದಲ್ಲಿ ನಡೆದ ಸರಳ ವಿವಾಹ| 

ಕುರುಗೋಡು(ಏ.18): ಕೊರೋನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಪಟ್ಟಣದ ಶ್ರೀ ಕಲ್ಲೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಸರಳವಾಗಿ ವಿವಾಹ ಜರುಗಿತು. ಬಳ್ಳಾರಿಯ ಕೌಲ್‌ ಬಜಾರ್‌ ಪೊಲೀಸ್‌ ಠಾಣೆಯಲ್ಲಿ ಪೇದೆಯಾಗಿ ಸೇವೆ ಸಲ್ಲಿಸುತ್ತಿರುವ ಪಟ್ಟಣದ ರಾಮಚಂದ್ರ ಅವರು ಹೊಸ ದರೋಜಿಯ ಸುಮತಿ ಅವರನ್ನು ವರಿಸಿದ್ದಾರೆ. 

ಸ್ಥಳೀಯ ಠಾಣೆಯ ಪಿಎಸ್‌ಐ ಎಂ. ಕೃಷ್ಣಮೂರ್ತಿ ಸ್ಥಳಕ್ಕೆ ಭೇಟಿ ನೀಡಿ, ವಿವಾಹ ಕಾರ್ಯಕ್ಕೆ ಹೆಚ್ಚಿನ ಜನ ಸೇರದಂತೆ ಜಾಗೃತಿ ವಹಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸಿದ್ದರು. 

ಮೆಂತೋಪ್ಲಸ್‌ ಡಬ್ಬಿ ನುಂಗಿ 9 ತಿಂಗಳ ಮಗು ದಾರುಣ ಸಾವು

ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು-ವರರಿಗೆ ಸ್ಥಳದಲ್ಲಿದ್ದ ಕೆಲವೇ ಕೆಲವು ಜನ ಆಶೀರ್ವದಿಸಿದ್ದಾರೆ.