ಪೇದೆ ಬಿ.ಪ್ರದೀಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಕಮಿಷನರ್‌ ಅವರಿಗೆ ದೂರು ನೀಡಿದ್ದ ಸಂಸದ ಪ್ರತಾಪ್ ಸಿಂಹ, ಇಲಾಖಾ ವಿಚಾರಣೆ ಬಾಕಿ ಇರಿಸಿ ಮುಖ್ಯ ಪೇದೆ ಬಿ.ಪ್ರದೀಪ್ ಅವರನ್ನ ಅಮಾನತು ಮಾಡಿ ಆದೇಶ ಹೊರಡಿಸಿದ ಪೊಲೀಸ್ ಆಯುಕ್ತ ರಮೇಶ್ ಬಾನೋತ್ 

ಮೈಸೂರು(ಜು.02):  ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾತ್‌ ಸಿಂಹ ಅವರ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನಲೆಯಲ್ಲಿ ಪೊಲೀಸ್ ಮುಖ್ಯ ಪೇದೆಯನ್ನ ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದ ವಿವಿ.ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಮುಖ್ಯ ಪೇದೆ ಬಿ.ಪ್ರದೀಪ್ ಎಂಬುವರೇ ಅಮಾನತು ಆಗಿದ್ದಾರೆ. ಸಂಸದ ಪ್ರತಾಪ್ ಸಿಂಹ ವಿರುದ್ಧ ಹಾಕಲಾಗಿದ್ದ ಕಮೆಂಟ್ ಹಾಕಲಾಗಿತ್ತು. 

ಪೊಲೀಸರಿಗೆ ವಾರದ ರಜೆ, ರಾತ್ರಿ ಪಾಳಿ ಭತ್ಯೆ: ಗೃಹ ಸಚಿವ ಪರಮೇಶ್ವರ್‌

ಸ್ಕ್ರೀನ್ ಶಾಟ್ ಸೇರಿಸಿ ಪೇದೆ ಬಿ.ಪ್ರದೀಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಕಮಿಷನರ್‌ ಅವರಿಗೆ ಸಂಸದ ಪ್ರತಾಪ್ ಸಿಂಹ ಅವರು ದೂರು ನೀಡಿದ್ದರು. ಇಲಾಖಾ ವಿಚಾರಣೆ ಬಾಕಿ ಇರಿಸಿ ಮುಖ್ಯ ಪೇದೆ ಬಿ.ಪ್ರದೀಪ್ ಅವರನ್ನ ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.