ಬೆಂಗಳೂರಿನಿಂದ ಮಂಗಳೂರಿಗೆ ತೆರಳಿದ್ದ ಕಾಂಗ್ರೆಸ್ ನಿಯೋಗವನ್ನು ಪೊಲೀಸರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡನ್ನು ವಶಕ್ಕೆ ಪಡೆಯಲಾಗಿದೆ. ಏರ್ ಪೋರ್ಟ್‌ನಿಂದ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು ನಾಯಕರನ್ನು ವಿಮಾನ ನಿಲ್ದಾಣದಿಂದ ಹೊರ ಹೋಗಲು ಬಿಟ್ಟಿಲ್ಲ.

ಮಂಗಳೂರು(ಡಿ.20): ಬೆಂಗಳೂರಿನಿಂದ ಮಂಗಳೂರಿಗೆ ತೆರಳಿದ್ದ ಕಾಂಗ್ರೆಸ್ ನಿಯೋಗವನ್ನು ಪೊಲೀಸರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡನ್ನು ವಶಕ್ಕೆ ಪಡೆಯಲಾಗಿದೆ.

""

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಗುರುವಾರ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಹಿಮಸಾಚಾರ ನಡೆದ ಹಿನ್ನೆಲೆ ಕಾಂಗ್ರೆಸ್‌ ಮುಖಂಡರ ನಿಯೋಗ ಬೆಂಗಳೂರಿನಿಂದ ಹೊರಟು ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದೆ.

ಕಾಂಗ್ರೆಸ್ ನಿಯೋಗದ ಮಂಗಳೂರು ಟಿಕೆಟ್ ಬುಕ್

ಕರ್ಫ್ಯೂ ಹಿನ್ನೆಲೆಯಲ್ಲಿ ಎಲ್ಲ ಪ್ರದೇಶಗಳಲ್ಲಿಯೂ ಕಟ್ಟು ನಿಟ್ಟಿನ ಪೊಲೀಸ್‌ ಭದ್ರತೆ ಒದಗಿಸಲಾಗಿದ್ದು, ವಿಮಾನ ನಿಲ್ದಾಣದಲ್ಲಿಯೂ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಂಗ್ರೆಸ್ ನಿಯೋಗವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಏರ್ ಪೋರ್ಟ್‌ನಿಂದ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು ನಾಯಕರನ್ನು ವಿಮಾನ ನಿಲ್ದಾಣದಿಂದ ಹೊರ ಹೋಗಲು ಬಿಟ್ಟಿಲ್ಲ. ವಿ. ಎಸ್‌. ಉಗ್ರಪ್ಪ ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳೂರಿಗೆ ಆಗಮಿಸಿತ್ತು. ನಿಯೋಗದಲ್ಲಿ ರಮೇಶ್ ಕುಮಾರ್, ಎಂ.ಬಿ.ಪಾಟೀಲ್, ಬಸವರಾಜ್ ರಾಯರೆಡ್ಡಿ ಸೇರಿ 6 ಜನ ನಾಯಕರು ಬೆಂಗಳೂರಿನಿಂದ ಮಂಗಳೂರಿಗೆ ತೆರಳಿದ್ದರು. ಆದರೆ ಕರ್ಫ್ಯೂ ಹಿನ್ನೆಲೆ ಕಾಂಗ್ರೆಸ್‌ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಲ್ಲಿ ಎಲ್ಲ ಪೆಟ್ರೋಲ್ ಬಂಕ್ ಬಂದ್‌..!