Asianet Suvarna News Asianet Suvarna News

ಬಂಟ್ವಾಳ: ಜನತಾ ಕರ್ಫ್ಯೂ ವೇಳೆ ಬೇಕಾಬಿಟ್ಟಿ ಓಡಾಟ, 20 ವಾಹನಗಳು ಸೀಜ್‌

ಸರ್ಕಾರದ ನಿಯಮ ಗಾಳಿಗೆ ತೂರಿ ಅನಗತ್ಯವಾಗಿ ತಿರುಗಾಟ| ಎರಡು ಕಾರು ಹಾಗೂ 18 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು| ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರದಲ್ಲಿ ನಡೆದ ಘಟನೆ| 

Police Seized 20 Vechicles Plying During Janata Curfew at Bantwal in Dakshina Kannada grg
Author
Bengaluru, First Published May 1, 2021, 3:36 PM IST

ಬಂಟ್ವಾಳ(ಮೇ.01): ಜನತಾ ಕರ್ಫ್ಯೂ ಅವಧಿಯಲ್ಲಿ ಅನಾವಶ್ಯಕವಾಗಿ ತಿರುಗಾಟ ನಡೆಸಿದ ಹಿನ್ನೆಲೆಯಲ್ಲಿ ಸುಮಾರು  20 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರದಲ್ಲಿ ಇಂದು(ಶನಿವಾರ) ನಡೆದಿದೆ.

ಬಿಸಿ ರೋಡ್‌ ಹಾಗೂ ಇತರ ಕಡೆಗಳಲ್ಲಿ ಕೋವಿಡ್ ಜನತಾ ಕರ್ಫ್ಯೂ ಅವಧಿಯಲ್ಲಿ  ನಿಯಮ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಎರಡು ಕಾರು ಹಾಗೂ 18 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ದಂಡ ವಿಧಿಸಿದ್ದಾರೆ.

"

Police Seized 20 Vechicles Plying During Janata Curfew at Bantwal in Dakshina Kannada grg

ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಹೀಗಾಗಿ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜನತಾ ಕರ್ಫ್ಯೂ ನಿಯಮ‌ ಜಾರಿ ಮಾಡಿದೆ. ಆದರೆ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಅನಗತ್ಯವಾಗಿ ತಿರುಗಾಟ ನಡೆಸುತ್ತಿದ್ದ ಬಗ್ಗೆ ಪೋಲೀಸರು ಗರಂ ಆಗಿದ್ದಲ್ಲದೆ ಅಂತವರ ವಾಹನಗಳ ಮೇಲೆ ದಂಡ ವಿಧಿಸಿದ್ದಾರೆ.

ಬಂಟ್ವಾಳ ನಗರ ಠಾಣಾ ಎಸ್‌ಐ. ಅವಿನಾಶ್ ಹಾಗೂ ಗ್ರಾಮಾಂತರ ಎಸ್.ಐ. ಪ್ರಸನ್ನ ಅವರ ನೇತೃತ್ವದಲ್ಲಿ ವಶಕ್ಕೆ ಪಡೆದುಕೊಂಡು ದಂಡ ವಿಧಿಸಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

Follow Us:
Download App:
  • android
  • ios