ಸಾಗರ ತಾಲೂಕು ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆ ಪ್ರಕರಣ ಹೆಚ್ಚಳ; ಹಾಲಪ್ಪ ಎಚ್ಚರಿಕೆ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಸೇವನೆ ಪ್ರಕರಣ ಜಾಸ್ತಿಯಾಗುತ್ತಿದೆ, ಈ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಶಾಸಕ ಹರತಾಳು ಹಾಲಪ್ಪ ಸೂಚಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಸಾಗರ(ಜೂ.03): ತಾಲೂಕು ವ್ಯಾಪ್ತಿಯಲ್ಲಿ ಗಾಂಜಾ ಸೇರಿ ಮಾದಕ ವಸ್ತುಗಳ ಸೇವನೆ ಪ್ರಕರಣ ಜಾಸ್ತಿಯಾಗುತ್ತಿದೆ. ಇದರಿಂದ ಅಪಘಾತ, ಹೊಡೆದಾಟ, ಕೊಲೆಯಂತಹ ಘಟನೆಗಳು ಸಹ ಸಂಭವಿಸುತ್ತಿದ್ದು, ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಶಾಸಕ ಎಚ್.ಹಾಲಪ್ಪ ಹೇಳಿದರು.
ನಗರಸಭೆ ಸಭಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಗಾಂಜಾ ಎಲ್ಲಿಂದ ಬರುತ್ತಿದೆ, ಯಾರು ಖರೀದಿಸುತ್ತಿದ್ದಾರೆ, ಯಾರು ಮಾರಾಟ ಮಾಡುತ್ತಿದ್ದಾರೆ ಎನ್ನುವ ಕುರಿತು ಸೂಕ್ತ ತನಿಖೆ ನಡೆಸಬೇಕು. ಪೊಲೀಸ್, ಅರಣ್ಯ, ಅಬ್ಕಾರಿ ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆಗೆ ಇಳಿಯಬೇಕು. ಇದರ ಜೊತೆಗೆ ಕೆಮ್ಮಿನ ಔಷಧಿ ಸೇವಿಸಿ ಮತ್ತು ಬರಿಸಿಕೊಳ್ಳುವ ಯುವಕರ ಜಾಲವೂ ಇದೆ. ಇದರ ಬಗ್ಗೆಯೂ ತನಿಖೆ ನಡೆಸುವಂತೆ ಸೂಚನೆ ನೀಡಿದರು.
ಭಾನುವಾರ ಬಳಸಗೋಡು ಸಮೀಪ ನಗರಸಭೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು 6 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವ ಮೂಲಕ ಉತ್ತಮ ಕೆಲಸ ಮಾಡಿದ್ದಾರೆ. ಇದು ಮುಂದುವರೆಯಬೇಕು. ನಗರಸಭೆ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಸರ್ಕಾರಿ ಜಮೀನು ಒತ್ತುವರಿಯಾಗಿದೆ ಎಂಬುದನ್ನು ಪತ್ತೆಹಚ್ಚಿ ತಕ್ಷಣ ತೆರವು ಮಾಡಿ ಬೇಲಿ ಹಾಕಿ ಸಂರಕ್ಷಣೆ ಮಾಡಬೇಕು. ಕೆಲವರು ಸರ್ಕಾರಿ ಜಾಗ ಒತ್ತುವರಿ ಮಾಡಿ ಲೇಔಟ್ ಆಗಿ ಪರಿವರ್ತಿಸಿ ಬಡವರಿಗೆ ಮಾರಾಟ ಮಾಡುತ್ತಿದ್ದಾರೆ. ಯಾರಾರಯರು ಅನಕೃತವಾಗಿ ಒತ್ತುವರಿ ಮಾಡಿದ್ದಾರೋ ಅದನ್ನು ತಕ್ಷಣದಿಂದಲೆ ತೆರವುಗೊಳಿಸಬೇಕು. ಇಂತಹ ಕಾರ್ಯಾಚರಣೆ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸಹಕಾರ ನೀಡಬೇಕು ಎಂದು ಸೂಚಿಸಿದರು.
ಗಾಂಜಾ, ಇಸ್ಪೀಟ್ ಜೂಜಾಟ ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ವಿಫಲ: ಆರೋಪ
ಸರ್ಕಾರಿ ಜಾಗ ಬಿಡಿಸಿಕೊಂಡು ಬಡವರಿಗೆ ನಿವೇಶನ ಕೊಡೋಣ. ಬಡವರು ಅಕ್ರಮ ನಿವೇಶನ ಖರೀದಿಸಿ ಸಂಕಷ್ಟಕ್ಕೆ ಸಿಲುಕುವುದನ್ನು ತಪ್ಪಿಸೋಣ ಎಂದ ಶಾಸಕರು, ಗ್ರಾಮಾಂತರ ಪ್ರದೇಶಗಳಲ್ಲಿ ಡಿಮ್ಯಾಂಡ್ ಏರಿಸಿ ಜಾಗ ಕಬಳಿಸುವುದು ನಿಲ್ಲಬೇಕು. ಇದಕ್ಕೆ ಕೆಲವು ಅಕಾರಿಗಳು ಶಾಮೀಲಾಗಿರುತ್ತಾರೆ. ಅಂತಹ ಪ್ರಕರಣ ನನ್ನ ಗಮನಕ್ಕೆ ಬಂದರೆ ಅಕಾರಿ ತಲೆ ಕೊಡಬೇಕಾಗುತ್ತದೆ. ಸಾಗರ ಪಟ್ಟಣದ ಸುತ್ತಮುತ್ತಲಿನ ಐದು ಕಿ.ಮೀ. ವ್ಯಾಪ್ತಿಯಲ್ಲಿನ ಸರ್ಕಾರಿ ಜಾಗವನ್ನು ಗುರುತಿಸಿ ಒತ್ತುವರಿಯಾಗಿದ್ದರೇ ತೆರವುಗೊಳಿಸಿ ತಕ್ಷಣ ರಕ್ಷಣೆ ಮಾಡಿ ಎಂದು ಸೂಚನೆ ನೀಡಿದರು.
ಶಿವಮೊಗ್ಗದಲ್ಲಿ ನಗರದಲ್ಲಿ 22 ಸಾವಿರ ಎಲ್‌ಇಡಿ ದೀಪ ಅಳವಡಿಕೆ: ಸಚಿವ ಭೈರತಿ ಬಸವರಾಜ್
ಕಳೆದ ವರ್ಷದ ಅನುದಾನದಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ಈ ವರ್ಷ ಮಾರ್ಚ್ ತಿಂಗಳಿನಲ್ಲಿ ಪೂರೈಸಬೇಕಾಗಿತ್ತು. ಯಾರು ಈತನಕ ಕಾಮಗಾರಿ ಮುಗಿಸಿಲ್ಲವೋ ಅಂತಹ ಗುತ್ತಿಗೆದಾರರಿಗೆ ನೋಟಿಸ್ ನೀಡಲು ತಿಳಿಸಿದ ಅವರು, ಸರ್ಕಾರಿ ಕಚೇರಿ ಮೇಲ್ಭಾಗದಲ್ಲಿ ಗಿಡ ಬೆಳೆಯುತ್ತಿದೆ. ಅದನ್ನು ಅಧಿಕಾರಿಗಳು ನೋಡಿಯೂ ನೋಡದಂತೆ ಇರುತ್ತಾರೆ. ಅದನ್ನು ತಕ್ಷಣ ತೆರವು ಮಾಡಬೇಕು. ಒಂದೊಮ್ಮೆ ಗಿಡ ಬೆಳೆದಿದ್ದೂ ನೋಡಿಕೊಂಡು ಸುಮ್ಮನೆ ಇದ್ದರೆ ಸಂಬಂಧಪಟ್ಟ ಅಧಿಕಾರಿ ವಿರುದ್ದ, ಯಾವ ಇಲಾಖೆಯಿಂದ ಕಟ್ಟಡ ನಿರ್ಮಾಣವಾಗಿದೆಯೋ ಆ ಇಲಾಖೆಯ ಅಕಾರಿ ವಿರುದ್ದ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಉಪವಿಭಾಗಾಧಿಕಾರಿ ಡಾ.ನಾಗರಾಜ್, ತಹಶೀಲ್ದಾರ್ ಚಂದ್ರಶೇಖರ ನಾಯ್ಕ, ಪೌರಾಯುಕ್ತ ಎಚ್.ಕೆ.ನಾಗಪ್ಪ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಪುಷ್ಪಾ ಎಂ. ಕಮ್ಮಾರ್, ಮೆಸ್ಕಾಂನ ಚಂದ್ರಶೇಖರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಹಾಲೇಶಪ್ಪ, ದಿನೇಶ್ ಕೆ., ಸರ್ಕಲ್ ಇನ್ಸ್‌ಪೆಕ್ಟರ್ ಮಹಾಬಲೇಶ್ವರ ನಾಯ್ಕ, ಸುನೀಲ್ ಕುಮಾರ್, ನಗರಸಭೆಯ ರಾಮಚಂದ್ರ, ಸಂತೋಷ್ ಕುಮಾರ್ ಇದ್ದರು.