Asianet Suvarna News Asianet Suvarna News

ಶಿರಾ ಉಪಚುನಾವಣೆ : ತಮ್ಮದೇ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ ಈ ಅಭ್ಯರ್ಥಿ

ಶಿರಾ ಉಪ ಚುನಾವಣೆ ತಯಾರಿ ಜೋರಾಗಿದೆ. ಎಲ್ಲಾ ಪಕ್ಷಗಳು ತಮ್ಮದೇ ಆದ ಎಲ್ಲಾ ಕೆಲಸಗಳನ್ನು ನಡೆಸುತ್ತಿದ್ದು, ಇದೀಗ ಎಲ್ಲಾ ಅಭ್ಯರ್ಥಿಗಳು ಗೆಲುವು ತಮ್ಮದಾಗಿಸಿಕೊಳ್ಳಲು ತಯಾರಿ ನಡೆಸುತ್ತಿದ್ದಾರೆ.

Political Parties Prepare For Shira By Election snr
Author
Bengaluru, First Published Sep 17, 2020, 11:11 AM IST

ತುಮಕೂರು (ಸೆ.17): ಜೆಡಿಎಸ್ ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಮದ ತೆರವಾಗೊರುವ  ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಶಿಘ್ರ ಚುನಾವಣೆ ನಡೆಯಲಿದ್ದು, ಈಗಾಗಲೇ ಪಕ್ಷ ಪಕ್ಷಗಳ ನಡುವೆ ಹಣಾಹಣಿ ಶುರುವಾಗಿದೆ. ಕ್ಷೇತ್ರ ಉಳಿಸಿಕೊಳ್ಳಲು ಜೆಡಿಎಸ್ ನಿರಂತರ ಸಭೆಗಳನ್ನು ನಡೆಸುತ್ತಿದ್ದು, ಚಟುವಟಿಕೆಗಳು ಬಿರುಸುಗೊಂಡಿವೆ.

ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದು ಖಚಿತವಾಗಿದೆ. 

ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಜಯಚಂದ್ರ ಈಗಾಗಲೇ ಶಿರಾ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಗೆದ್ದಿರುವ ಜಯಚಂದ್ರ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರನನ್ನು ಚಿಕ್ಕನಾಯಕನಹಳ್ಳಿಯಲ್ಲಿ ನಿಲ್ಲಿಸಿ ತಾವು ಶಿರಾದಿಂದ ಸ್ಪರ್ಧೆ ಮಾಡಿದ್ದರು.  ಆದರೆ ಅವರು ಸೋತಿದ್ದು, ಇದೀಗ ಮತ್ತೊಮ್ಮೆ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. 

ಶಿರಾ ಬೈ ಎಲೆಕ್ಷನ್‌ಗೆ ಕಾಂಗ್ರೆಸ್ ರಣಕಹಳೆ: ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಉಸ್ತುವಾರಿ ನೇಮಕ

ಇನ್ನು ಮೂರು ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದ  ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಇದೀಗ ಚುನಾವಣೆ ತಯಾರಿ ಚುರುಕುಗೊಂಡಿದೆ.

ಸುರೇಶ್ ಗೌಡರಿಗೆ ಸವಾಲು ಕೆಲ ತಿಂಗಳ ಹಿಂದೆಯಷ್ಟೇ ಎರಡನೇ ಬಾರಿಗೆ  ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿರುವ ಬಿ ಸುರೇಶಗೌಡರು ಈ ಕ್ಷೇತ್ರವನ್ನು ಸವಾಲಾಗಿ ತೆಗೆದುಕೊಂಡಿದ್ದಾರೆ. ಸದ್ಯ ಶಿರಾದಲ್ಲೇ ಮೊಕ್ಕಾಂ ಹೂಡಿರುವ ಅವರು ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಮಾಡಿಕೊಂಡಿದ್ದಾರೆ.

Follow Us:
Download App:
  • android
  • ios