ಆರ್‌.ಉಗ್ರೇಶ್‌ ಪರ ಎಚ್‌.ಡಿ.ದೇವೇಗೌಡರಿಂದ ಮತಯಾಚನೆ

ಶಿರಾ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್‌ ಅಭ್ಯರ್ಥಿಯಾದ ಆರ್‌.ಉಗ್ರೇಶ್‌ ಅವರನ್ನು ಗೆಲ್ಲಿಸಬೇಕೆಂಬ ನಿಟ್ಟಿನಲ್ಲಿ ಜೆಡಿಎಸ್‌ ವರಿಷ್ಠರು ಮೊಟ್ಟಮೊದಲ ಬಾರಿಗೆ ಶಿರಾ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಹಾಗೂ ಕ್ಷೇತ್ರದ ಕಾರ್ಯಕರ್ತರು ಆರ್‌.ಉಗ್ರೇಶ್‌ ಅವರನ್ನು ಗೆಲ್ಲಿಸಲೇಬೇಕೆಂದು ಅಚಲವಾದ ನಿರ್ಧಾರ ಮಾಡಿದ್ದಾರೆ ಎಂದು ರೇಷ್ಮೆ ನಿಗಮದ ಮಾಜಿ ಅಧ್ಯಕ್ಷರು ಹಾಗೂ ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್‌.ಆರ್‌.ಗೌಡ ಹೇಳಿದರು.

Polling by HD Deve Gowda for R. Ugresh snr

 ಶಿರಾ   ಶಿರಾ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್‌ ಅಭ್ಯರ್ಥಿಯಾದ ಆರ್‌.ಉಗ್ರೇಶ್‌ ಅವರನ್ನು ಗೆಲ್ಲಿಸಬೇಕೆಂಬ ನಿಟ್ಟಿನಲ್ಲಿ ಜೆಡಿಎಸ್‌ ವರಿಷ್ಠರು ಮೊಟ್ಟಮೊದಲ ಬಾರಿಗೆ ಶಿರಾ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಹಾಗೂ ಕ್ಷೇತ್ರದ ಕಾರ್ಯಕರ್ತರು ಆರ್‌.ಉಗ್ರೇಶ್‌ ಅವರನ್ನು ಗೆಲ್ಲಿಸಲೇಬೇಕೆಂದು ಅಚಲವಾದ ನಿರ್ಧಾರ ಮಾಡಿದ್ದಾರೆ ಎಂದು ರೇಷ್ಮೆ ನಿಗಮದ ಮಾಜಿ ಅಧ್ಯಕ್ಷರು ಹಾಗೂ ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್‌.ಆರ್‌.ಗೌಡ ಹೇಳಿದರು.

ನಗರದ ಜೆಡಿಎಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಏ.24ರ ಸೋಮವಾರ ಬೆಳಗ್ಗೆ 11 ಗಂಟೆಗೆ ನಗರದ ಪ್ರೆಸಿಡೆನ್ಸಿ ಶಾಲೆ ಪಕ್ಕದಲ್ಲಿರುವ ಮೈದಾನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ ಹಾಗೂ ವಿವಿಧ ನಾಯಕರು ಆಗಮಿಸಲಿದ್ದಾರೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್‌ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಜೆಡಿಎಸ್‌ ಅಭ್ಯರ್ಥಿ ಆರ್‌.ಉಗ್ರೇಶ್‌ ಮಾತನಾಡಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಸೋಮವಾರ ಶಿರಾಕ್ಕೆ ಆಗಮಿಸಲಿದ್ದಾರೆ. ಕಳೆದ ಒಂದು ವರ್ಷದಿಂದ ಯಾವುದೇ ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸಿರಲಿಲ್ಲ. ಆದರೆ ಶಿರಾ ಕ್ಷೇತ್ರದ ಅಭಿಮಾನದ ಮೇರೆಗೆ ಆಗಮಿಸುತ್ತಿದ್ದಾರೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಎಂದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಸತ್ಯಪ್ರಕಾಶ್‌ ಮಾತನಾಡಿ, ಶಿರಾ ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ದೃಢ ನಿರ್ಧಾರ ಮಾಡಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಇಳಿ ವಯಸ್ಸಿನಲ್ಲೂ ಕಾರ್ಯಕರ್ತರಲ್ಲಿ ಸ್ಫೂರ್ತಿ ತರುವ ನಿಟ್ಟಿನಲ್ಲಿ ಶಿರಾಕ್ಕೆ ಆಗಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷ ಬಿ.ಅಂಜಿನಪ್ಪ, ಜೆಡಿಎಸ್‌ ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ರೆಹಮತ್‌ ಉಲ್ಲಾ ಖಾನ್‌, ನಗರ ಜೆಡಿಎಸ್‌ ಅಧ್ಯಕ್ಷ ಶ್ರೀರಂಗ, ಮಾಜಿ ಸೂಡಾ ಅಧ್ಯಕ್ಷ ಈರಣ್ಣ, ನಗರಸಭಾ ಮಾಜಿ ಸದಸ್ಯ ಆರ್‌.ರಾಘವೇಂದ್ರ, ನಿಸರ್ಗ ಸುರೇಶ್‌, ಬ್ಯಾಡಗೆರೆ ಕೊಲ್ಲಾರಪ್ಪ, ಪಿಎಲ್‌ಡಿ ಮಾಜಿ ಬ್ಯಾಂಕ್‌ ಅಧ್ಯಕ್ಷ ನಾಗರಾಜಪ್ಪ, ಪರಮೇಶ್‌ ಗೌಡ, ಎಸ್‌.ಎಸ್‌.ನಾಗಭೂಷಣ್‌, ಪಡಿ ರಮೇಶ್‌ ಸೇರಿದಂತೆ ಹಲವರು ಹಾಜರಿದ್ದರು.

Latest Videos
Follow Us:
Download App:
  • android
  • ios