ಬಳ್ಳಾರಿ ಜಿಲ್ಲೆಯ ಸೋಮಸಮುದ್ರ ಗ್ರಾಮದ ಬಳಿ ಫುಟ್ಪಾತ್ ಮೇಲೆ ನಿಂತಿದ್ದವರ ಮೇಲೆ ಏಕಾಏಕಿ ಲಾರಿಯೊಂದು ನುಗ್ಗಿದೆ. ಈ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಮೂವರಿಗೆ ಗಾಯಗಳಾಗಿವೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕುರಗೋಡು ಪೊಲೀಸರು ಪ್ರಕರಣ ದಾಖಲು.
ಬಳ್ಳಾರಿ (ಸೆ.29): ಫುಟ್ಪಾತ್ ಮೇಲೆ ನಿಂತಿದ್ದವರ ಮೇಲೆ ಯಮನಂತೆ ನುಗ್ಗಿದ ಲಾರಿಯೊಂದು ಓರ್ವ ಮಹಿಳೆಯನ್ನು ಬಲಿ ಪಡೆದ ಘಟನೆ ಬಳ್ಳಾರಿ ಜಿಲ್ಲೆಯ ಕುರಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ನಡೆದಿದೆ.
ಬಳ್ಳಾರಿಯಲ್ಲಿ ಭೀಕರ ಅಪಘಾತ; ಓರ್ವ ಮಹಿಳೆ ಸಾವು
ಲಾರಿ ಡಿಕ್ಕಿಯಾದ ರಭಸಕ್ಕೆ ಮಹಾದೇವಿ (48) ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನು ಸುನೀತಾ, ಪೂಜಾರಿ ಜೆಡೆಮ್ಮ, ಗಗನ್ ಎಂಬುವವರಿಗೆ ಗಾಯಗಳಾಗಿದ್ದು ಮೂವರಿಗೆ ಗಾಯಗಳಾಗಿದ್ದು, ಬಳ್ಳಾರಿ ಟ್ರಾಮಾಕೇರ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಫುಟ್ಪಾತ್ ನಲ್ಲಿ ಮಾತಾಡುತ್ತಾ ನಿಂತಿದ್ದವರ ಮೇಲೆ ಹರಿದ ಲಾರಿ!
ಘಟನೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಸೋಮಸಮುದ್ರ ಗ್ರಾಮದ ಬೇಕರಿ ಮುಂದಿನ ಫುಟ್ಪಾತ್‌ನಲ್ಲಿ ಮೂವರು ಮಾತನಾಡುತ್ತಾ ನಾಲ್ವರು ನಿಂತಿದ್ದಾರೆ. ಈ ವೇಳೆ ಏಕಾಏಕಿ ನಾಲ್ವರ ಮೇಲೆ ನುಗ್ಗಿ ಡಿಕ್ಕಿ ಹೊಡೆದಿದೆ. ಮುಂದಾಗುವ ಅಪಾಯದ ಅರಿವಿರದೆ ಮಾತನಾಡುತ್ತಿದ್ದ ನಿಂತಿದ್ದವರು ಎಚ್ಚೆತ್ತುಕೊಳ್ಳುವಷ್ಟರಲ್ಲೇ ಲಾರಿ ಹರಿದಿದೆ. ಈ ಗಂಭೀರ ಗಾಯಗೊಂಡಿದ್ದ ಮಹಾದೇವಿ ಸ್ಥಳದಲ್ಲೇ ಮೃತಪಟ್ಟರೆ ಇನ್ನುಳಿದ ಮೂವರಿಗೆ ಗಾಯಗಾಳಾಗಿದ್ದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಕುರಗೋಡ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

