ರಾಮನ ಬಗ್ಗೆ ಅವಹೇಳನ : ಪರಿಸ್ಥಿತಿ ಸಂಪೂರ್ಣ ಉದ್ವಿಗ್ನ
ಶ್ರೀ ರಾಮನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದನ್ನು ಖಂಡಿಸಿ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಪೋಸ್ಟ್ ಹಾಕಲಾಗಿದೆ.
ರಾಯಚೂರು (ಆ.20): ಶ್ರೀರಾಮ ದೇವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವುದನ್ನು ಖಂಡಿಸಿ, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಶ್ರೀರಾಮ ಸೇನೆಯ ನೂರಾರು ಕಾರ್ಯಕರ್ತರು ದೇವದುರ್ಗ ಠಾಣೆ ಎದುರು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ರಾಮ ಮಂದಿರ ಕೆಡವಿ ಮತ್ತೆ ಮಸೀದಿ ನಿರ್ಮಿಸುತ್ತೇವೆ; ಎಚ್ಚರಿಕೆ ನೀಡಿದ ಮುಸ್ಲಿಂ ಮೌಲ್ವಿ!...
ಜಹೀರ್ ಎಂಬಾತ ಫೇಸ್ಬುಕ್ನಲ್ಲಿ ಶ್ರೀರಾಮ ದೇವರ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದು ಅದು ಭಾರೀ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಶ್ರೀರಾಮ ಸೇನೆ ಕಾರ್ಯಕರ್ತರು ತಡರಾತ್ರಿ ಠಾಣೆ ಮುಂದೆ ಜಮಾಯಿಸಿ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಇದರಿಂದ ಠಾಣೆ ಮುಂದೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕರೆಸಲಾಗಿದೆ.