Asianet Suvarna News Asianet Suvarna News

ಪಿಜಿಸಿಇಟಿ ಮುಂದಕ್ಕೆ: ಅರ್ಜಿ ಸಲ್ಲಿಸಲು ಜು.7ರವರೆಗೆ ಅವಕಾಶ

ಪರೀಕ್ಷೆ ನಡೆಯುವ ಹೊಸ ದಿನಾಂಕವನ್ನು ಮುಂಬರುವ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

Postponement of PGCET-2024 exam date mrq
Author
First Published Jun 25, 2024, 10:37 PM IST | Last Updated Jun 25, 2024, 10:37 PM IST

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2024) ಎಂಬಿಎ, ಎಂಸಿಎ, ಎಂ.ಇ./ಎಂ.ಟೆಕ್./ ಎಂ.ಆರ್ಕಿಟೆಕ್ಚ್ರ್ ಕೋರ್ಸುಗಳ ಪ್ರವೇಶಕ್ಕೆ ಅರ್ಹತೆ ನಿರ್ಧರಿಸಲು ಜುಲೈ 13 ಮತ್ತು 14 ರಂದು ನಡೆಸಲು ನಿಗದಿಪಡಿಸಲಾಗಿದ್ದ ಪಿಜಿಸಿಇಟಿ-2024ರ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.

ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 5 ಮತ್ತು ಜುಲೈ 10 ರಿಂದ ಪ್ರಾರಂಭವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ  ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪರೀಕ್ಷೆ ನಡೆಯುವ ಹೊಸ ದಿನಾಂಕವನ್ನು ಮುಂಬರುವ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಮಂಡ್ಯದಲ್ಲಿ ಡಿ.20ರಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ; ಸಿಎಂ ಸಿದ್ದರಾಮಯ್ಯ

ಈ ಮುಂದೂಡಿಕೆ ಹಿನ್ನೆಲೆಯಲ್ಲಿ, ಪಿಜಿಸಿಇಟಿ-2024ಕ್ಕೆ ನೋಂದಣಿ ಮಾಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೂ ಕಾಲಾವಕಾಶ ವಿಸ್ತರಣೆ ಮಾಡಿ ಅಂತಿಮ ಅವಕಾಶ ಕಲ್ಪಿಸಲಾಗಿದೆ.  ಇಲ್ಲಿಯವರೆಗೆ ನೋಂದಣಿ ಮಾಡದೇ ಇರುವ ಆಸಕ್ತ ಅಭ್ಯರ್ಥಿಗಳು ಜುಲೈ 7ರ ಒಳಗೆ ನೋಂದಣಿ ಮಾಡಿ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಿ ಜುಲೈ 9ರ ಸಂಜೆ 6.00 ರೊಳಗೆ ಶುಲ್ಕ ಪಾವತಿಸಬಹುದು. ನೋಂದಣಿ ಮಾಡಲು ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. 

ಪರಿಷ್ಕೃತ ಮಾಹಿತಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್  http://kea.kar.nic.in ನೋಡುತ್ತಿರಬೇಕೆಂದು ಸೂಚಿಸಲಾಗಿದೆ.

ದೇಶದ 3 ಹೊಸ ಕ್ರಿಮಿನಲ್ ಕಾನೂನುಗಳು ತ್ವರಿತ ನ್ಯಾಯ ಖಾತ್ರಿಪಡಿಸುತ್ತವೆ; ಡಿ.ಆರ್. ವೆಂಕಟ ಸುದರ್ಶನ್

Latest Videos
Follow Us:
Download App:
  • android
  • ios