Asianet Suvarna News Asianet Suvarna News

ಮೈಸೂರು ನಗರದಲ್ಲಿ ಅ. 3 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಸೆಸ್ಕ್ 66/11 ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ 2ನೇ ತ್ರೈ ಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಅ.3ರ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

Power cut in Many Areas of Mysuru On October 3 snr
Author
First Published Oct 2, 2023, 6:24 AM IST

  ಮೈಸೂರು :  ಸೆಸ್ಕ್ 66/11 ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ 2ನೇ ತ್ರೈ ಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಅ.3ರ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ರಾಮಾನುಜ ರಸ್ತೆ 1 ರಿಂದ 9ನೇ ಕ್ರಾಸ್ ವರೆಗೆ, ಹೊಸಬಂಡಿಕೇರಿ, ಜೆಎಸ್ಎಸ್ ಆಸ್ಪತ್ರೆ, ಅಗ್ರಹಾರ, ಬಸವೇಶ್ವರ ರಸ್ತೆ, ಚಾಮುಂಡಿಪುರಂನ ಹಲವು ಭಾಗಗಳು, ತ್ಯಾಗರಾಜ ರಸ್ತೆ, ಚಾಮುಂಡಿಬೆಟ್ಟ ಮತ್ತು ಪಾದ, ಗುಂಡೂರಾವ್ ನಗರ, ದತ್ತನಗರ, ಮುನೇಶ್ವರನಗರ, ಗೌರಿಶಂಕರನಗರ, ನಂಜನಗೂಡು ಟೋಲ್ ಗೇಟ್, ತಾವರೆಕೆರೆ, ಜಾಕಿ ಕ್ವಾಟ್ರಸ್, ರೇಸ್ ಕೋರ್ಸ್ ಹಿಂಭಾಗ, ಸಬರ್ಬ್ ಬಸ್ ನಿಲ್ದಾಣ, ನಜರ್‌ ಬಾದ್, ಇಟ್ಟಿಗೆಗೂಡು, ಮೃಗಾಲಯದ ಸುತ್ತಾಮುತ್ತ, ಸರ್ಕಾರಿ ಅಥಿತಿ ಗೃಹ ಸುತ್ತಮುತ್ತಲಿನ ಪ್ರದೇಶಗಳು, ತಾಲೂಕು ಕಚೇರಿ, ಡಿ. ದೇವರಾಜ ಅರಸು ರಸ್ತೆ, ಬಿಎನ್ ರಸ್ತೆ, ಚಾಮುಂಡಿಬೆಟ್ಟ, ಸಿದ್ದಾರ್ಥನಗರ, ಆಲನಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು, ಗಿರಿದರ್ಶಿನಿ ಬಡಾವಣೆ, ಅರಮನೆ ಸುತ್ತಾಮುತ್ತಲಿನ ಪ್ರದೇಶಗಳು, ಶ್ರೀ ಹರ್ಷ ರಸ್ತೆ, ಸಯ್ಯಾಜೀರಾವ್ ರಸ್ತೆ, ಇರ್ವಿನ್ ರಸ್ತೆ ಸುತ್ತಮುತ್ತಲಿನ ಪ್ರದೇಶಗಳು, ಧನ್ವಂತರಿ ರಸ್ತೆ ಹಾಗೂ ಶಿವರಾಂಪೇಟೆ ಸುತ್ತಮುತ್ತಲಿನ ಪ್ರದೇಶಗಳು.

ವಿದ್ಯುತ್ ಉತ್ಪಾದನೆ ಕುಸಿತ

ಬೆಂಗಳೂರು (ಸೆ.23): ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆ ಪ್ರಮಾಣ ಸ್ಥಾಪಿತ ಸಾಮರ್ಥ್ಯಕ್ಕಿಂತ ಕಡಿಮೆಯಾಗಿರುವುದಕ್ಕೆ ಇಂಧನ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್‌ ಉತ್ಪಾದನೆಗೆ ಕ್ರಮ ವಹಿಸುವಂತೆ ತಾಕೀತು ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ನಮ್ಮ ಮೊದಲ ಅವಧಿಯ ಸರ್ಕಾರದಲ್ಲಿ ಎಲ್ಲಾ ಸಮಸ್ಯೆಗಳ ನಡುವೆಯೇ ವಿದ್ಯುತ್ ಉತ್ಪಾದನೆ ದುಪ್ಪಟ್ಟಾಗಿತ್ತು. 2013 -14ರಲ್ಲಿ 14,048 ಮೆಗಾವ್ಯಾಟ್‌ ಇದ್ದ ಉತ್ಪಾದನಾ ಪ್ರಮಾಣ 2017-18ರ ವೇಳೆಗೆ 27,780 ಮೆಗಾವ್ಯಾಟ್‌ಗೆ ಏರಿಕೆಯಾಗಿತ್ತು. ಬಹುತೇಕ ದುಪ್ಪಟ್ಟಾಗಿತ್ತು. ಆದರೆ, ಕಳೆದ ನಾಲ್ಕು ವರ್ಷಗಳಿಂದ ಉತ್ಪಾದನೆ ಪ್ರಮಾಣ ಹೆಚ್ಚಳವಾಗಿಲ್ಲ. ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಯಾವ ಕಾರಣಕ್ಕೆ ಎಂದು ತರಾಟೆಗೆ ತೆಗೆದುಕೊಂಡರು.

ಡಿಸಿಎಂ ಹುದ್ದೆ ಆಸೆ ಪಡೋರಿಗೆ ನಾನು ಉತ್ತರ ಕೊಡೋದಿಲ್ಲ: ಡಿಕೆಶಿ

ಕಲ್ಲಿದ್ದಲು ಸರಿಯಿಲ್ಲ- ಅಧಿಕಾರಿಗಳ ಸ್ಪಷ್ಟನೆ: ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆಯಾಗಿರುವ ಕಲ್ಲಿದ್ದಲಿನ ಗುಣಮಟ್ಟ ಉತ್ತಮವಾಗಿಲ್ಲ. ಅಗತ್ಯ ಗುಣಮಟ್ಟದಲ್ಲಿ ಇಲ್ಲದಿರುವುದರಿಂದ ವಿದ್ಯುತ್‌ ಉತ್ಪಾದನೆಯ ಪ್ರಮಾಣದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಕೇಂದ್ರದ ಗಮನಕ್ಕೆ ತರಲಾಗಿದ್ದು, ಪ್ರತಿದಿನ ಎರಡು ರೇಕುಗಳಷ್ಟು ಹೆಚ್ಚುವರಿ ಕಲ್ಲಿದ್ದಲು ಹಂಚಿಕೆಗೆ ಕೋರಿದ್ದೇವೆ. ಇದಲ್ಲದೆ ಕಲ್ಲಿದ್ದಲು ಆಮದು ಮಾಡಲೂ ಸಹ ಟೆಂಡರ್‌ ಕರೆಯಲಾಗಿದೆ ಎಂದು ಸಮರ್ಥನೆ ನೀಡಿದರು.

ಅಧಿಕಾರಿಗಳ ವಿರುದ್ಧ ಸಿಎಂ ಗರಂ: ಇದಕ್ಕೆ ಸಮಾಧಾನಗೊಳ್ಳದ ಮುಖ್ಯಮಂತ್ರಿ ಅವರು, ಇದನ್ನು ಸರ್ಕಾರದ ಗಮನಕ್ಕೆ ಮೊದಲೇ ತರಬೇಕಿತ್ತು. ವಿದ್ಯುತ್‌ ಉತ್ಪಾದನೆ ಕುಸಿತದಿಂದಾಗಿ ವಿವಿಧ ಜಿಲ್ಲೆಗಳಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಬಗ್ಗೆ ರೈತ ಸಂಘಟನೆಗಳು, ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಇದರಿಂದ ಅನಧಿಕೃತ ಲೋಡ್‌ ಶೆಡ್ಡಿಂಗ್‌ ಮಾಡಲಾಗುತ್ತಿದೆ ಎಂದು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನಗಳು ನಡೆಯುತ್ತಿವೆ. ಯಾವುದೆ ಕಾರಣಕ್ಕೂ ಇದನ್ನು ಸಹಿಸುವುದಿಲ್ಲ. ಉಷ್ಣವಿದ್ಯುತ್‌ ಸ್ಥಾವರಗಳಲ್ಲಿ ತೇವಗೊಂಡ ಕಲ್ಲಿದ್ದಲು ಬಳಕೆ ಮಾಡಕೂಡದು. ಸ್ಥಾಪಿತ ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್‌ ಉತ್ಪಾದನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ನಿತ್ಯ 7 ಗಂಟೆ ತ್ರೀಫೇಸ್‌ ಸೇರಿದಂತೆ ಎಲ್ಲೆಡೆ ಸಮರ್ಪಕವಾಗಿ ವಿದ್ಯುತ್‌ ಪೂರೈಕೆಗೆ ಕ್ರಮ ವಹಿಸಬೇಕು ಎಂದು ತಾತೀಕು ಮಾಡಿದರು.

Follow Us:
Download App:
  • android
  • ios