ವಿದ್ಯುತ್ ಬಿಲ್ ಬಾಕಿ ಹಿನ್ನೆಲೆ; ಕಳೆದ 10 ದಿನದಿಂದ ಹೊಣಕೆರೆ ನಾಡಕಚೇರಿಗೆ ವಿದ್ಯುತ್ ಸಂಪರ್ಕ ಕಡಿತ
ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಳೆದ ಹತ್ತು ದಿನಗಳಿಂದ ತಾಲೂಕಿನ ಹೊಣಕೆರೆ ನಾಡಕಚೇರಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಹೋಬಳಿ ವ್ಯಾಪ್ತಿಯ ರೈತರು, ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರು ತಮ್ಮ ಕೆಲಸ ಕಾರ್ಯಗಳಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಕರಡಹಳ್ಳಿ ಸೀತಾರಾಮು
ನಾಗಮಂಗಲ (ಫೆ.3) : ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಳೆದ ಹತ್ತು ದಿನಗಳಿಂದ ತಾಲೂಕಿನ ಹೊಣಕೆರೆ ನಾಡಕಚೇರಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಹೋಬಳಿ ವ್ಯಾಪ್ತಿಯ ರೈತರು, ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರು ತಮ್ಮ ಕೆಲಸ ಕಾರ್ಯಗಳಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಹೋಬಳಿ ಕೇಂದ್ರವಾದ ಹೊಣಕೆರೆ ನಾಡಕಚೇರಿಯ ವಿದ್ಯುತ್ ಬಿಲ… ಬಾಕಿ 29453 ರು.ಗಳನ್ನು ಉಳಿಸಿಕೊಂಡಿರುವುದರಿಂದ ಸೆಸ್ಕಾಂ ಅಧಿಕಾರಿಗಳು ಹತ್ತು ದಿನಗಳ ಹಿಂದೆ ಕಚೇರಿಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಆದಾಗ್ಯೂ ಈವರೆಗೂ ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಬಿಲ… ಪಾವತಿಸಲು ಜಿಲ್ಲಾಡಳಿತ ಮುಂದಾಗಿಲ್ಲ.
ಸಣ್ಣ ನೀರಾವರಿ ಖಾತೆಗೆ ಬೆಲೆ ತಂದುಕೊಟ್ಟವರು ಸಿಎಸ್‌ಪಿ: ಡಾ.ನಿರ್ಮಾಲಾನಂದನಾಥ ಸ್ವಾಮೀಜಿ
ಈ ವ್ಯಾಪ್ತಿಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ರೈತರು ಮತ್ತು ಸಾರ್ವಜನಿಕರು ಈ ಕಚೇರಿಯಲ್ಲಿ ಆಗಬೇಕಿರುವ ಜಾತಿ ಆದಾಯ ದೃಢೀಕರಣ ಪತ್ರ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ ಕೆಲಸ ಕಾರ್ಯಗಳಿಗೆ ಸಲ್ಲಿಸಿರುವ ನೂರಾರು ಅರ್ಜಿಗಳು ವಿಲೇವಾರಿಯಾಗದೆ ಉಳಿದಿದ್ದರೂ ಸಹ ಉಪ ತಹಸೀಲ್ದಾರ್ ಅಥವಾ ಜಿಲ್ಲಾಡಳಿತದ ಅಧಿಕಾರಿಗಳು ಯಾವುದೇ ಕ್ರಮ ವಹಿಸದೆ ಈ ಭಾಗದ ಜನರನ್ನು ದಿನನಿತ್ಯ ಕಚೇರಿಗೆ ಅಲೆಯುವಂತೆ ಮಾಡಿದ್ದಾರೆ.
2021ರ ನವೆಂಬರ್ ತಿಂಗಳಲ್ಲಿ ಸೆಸ್ಕಾಂ ಇಲಾಖೆಗೆ 2210ರು.ಗಳ ವಿದ್ಯುತ್ ಬಿಲ… ಪಾವತಿಸಿರುವುದನ್ನು ಬಿಟ್ಟರೆ ಅಂದಿನಿಂದ ಈವರೆಗೂ ಹೊಣಕೆರೆ ನಾಡಕಚೇರಿಯ ವಿದ್ಯುತ್ ಬಿಲ… ಪಾವತಿಸಿಲ್ಲ. ಹಾಗಾಗಿ 2023ರ ಜ.13ಕ್ಕೆ ಈ ಕಚೇರಿಯ ವಿದ್ಯುತ್ ಬಿಲ… ಬರೋಬ್ಬರಿ 29,453 ರು.ಗೆ ತಲುಪಿದೆ. ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಬಿಲ… ಪಾವತಿಸುವಂತೆ ಸೆಸ್ಕಾಂ ಅಧಿಕಾರಿಗಳು ಹಲವು ಬಾರಿ ತಿಳಿವಳಿಕೆ ನೀಡಿದ್ದರೂ ಸಹ ಈವರೆಗೂ ಪಾವತಿಸದ ಕಾರಣದಿಂದಾಗಿ ಇಲಾಖೆಯ ನಿಯಮಾನುಸಾರ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದಾಗಿ ಸೆÓ್ಕ… ಅಧಿಕಾರಿಗಳು ಹೇಳುತ್ತಾರೆ.
ತಾಲೂಕಿನ ದೇವಲಾಪುರ, ಬಿಂಡಿಗನವಿಲೆ ಹಾಗೂ ಬೆಳ್ಳೂರು ಹೋಬಳಿಯ ನಾಡಕಚೇರಿಗಳಲ್ಲಿಯೂ ಸಹ 9 ಸಾವಿರದಿಂದ 25 ಸಾವಿರ ರು.ಗಳವರೆಗೆ ವಿದ್ಯುತ್ ಬಿಲ… ಬಾಕಿ ಇದ್ದು ಕಂದಾಯ ಇಲಾಖೆಯ ಅಧಿಕಾರಿಗಳು ಸಕಾಲಕ್ಕೆ ವಿದ್ಯುತ್ ಬಿಲ… ಪಾವತಿಸದಿದ್ದರೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಕಷ್ಟವಾಗುತ್ತದೆ.
ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡಚಣೆಯಾಗಬಾರದೆಂಬ ಉದ್ದೇಶದಿಂದ ನಾವೂ ಸಹ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಿಲ್ಲ. ಆದರೆ, ಹೊಣಕೆರೆ ನಾಡಕಚೇರಿ ವಿದ್ಯುತ್ ಬಿಲ… 29 ಸಾವಿರಕ್ಕೂ ಹೆಚ್ಚಿರುವುದರಿಂದ ಅನಿವಾರ್ಯವಾಗಿ ಸಂಪರ್ಕ ಕಡಿತಗೊಳಿಸಲಾಗಿದೆ.
ಬಾಕಿ ಬಿಲ್ಲನ್ನು ಈ ಕೂಡಲೇ ಪಾವತಿಸುವುದಾಗಿ ಸಂಬಂಧಿಸಿದ ಅಧಿಕಾರಿಗಳು ಕಳೆದೊಂದು ವಾರದಿಂದ ಹೇಳುತ್ತಿದ್ದಾರಾದರೂ ಈವರೆಗೂ ಪಾವತಿಸಿಲ್ಲ ಎಂದು ಸೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಕಚೇರಿಯ ವಿದ್ಯುತ್ ಬಿಲ… ಪಾವತಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿಗೆ ಹಲವು ಬಾರಿ ವರದಿ ಜೊತೆಗೆ ಮನವಿ ಮಾಡಲಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದರಿಂದ ಕಚೇರಿಗೆ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳು ವಿಲೇವಾರಿಯಾಗಿಲ್ಲ. ವಿದ್ಯುತ್ ಸಂಕರ್ಪ ದೊರೆಯುತ್ತಿದ್ದಂತೆ ಎಲ್ಲಾ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲಾಗುವುದೆಂದು ನಾಡಕಚೇರಿಯ ಸಿಬ್ಬಂದಿ ಹೇಳುತ್ತಾರೆ.
ಉಪ ತಹಸೀಲ್ದಾರ್‌ಗೆ ಇಚ್ಚಾಶಕ್ತಿಯಿಲ್ಲ!:
ನಾಡಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪ ತಹಸೀಲ್ದಾರ್‌ಗೆ ಕಚೇರಿಯ ನಿರ್ವಹಣೆಯ ಇಚ್ಛಾಶಕ್ತಿಯಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕಚೇರಿಯಲ್ಲಿ 10 ದಿನಗಳಿಂದ ವಿದ್ಯುತ್ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ಪ್ರತಿನಿತ್ಯ ಪರದಾಡುತ್ತಿದ್ದರೂ ಸಹ ತಮಗೂ ಇದಕ್ಕೂ ಸಂಬಂಧವಿಲ್ಲವೆಂಬಂತೆ ಕಚೇರಿಗೂ ಬಾರದೆ ನಾಗಮಂಗಲದ ತಾಲೂಕು ಕಚೇರಿಯಲ್ಲಿಯೇ ಕುಳಿತು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಚೇರಿಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ರೈತರ ಕೆಲಸ ಕಾರ್ಯಗಳು ಕುಂಠಿತವಾಗುತ್ತಿವೆ. ಈ ಅವ್ಯವಸ್ಥೆಗೆ ಯಾರು ಹೊಣೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.
ಸಂಸದೆ ಸುಮಲತಾರಿಂದ ಗ್ರಾಮಗಳಲ್ಲಿ ಸಾಮರಸ್ಯೆ ಹಾಳು; ಮಾಡರಹಳ್ಳಿ ಗ್ರಾಮಸ್ಥರು ಪ್ರತಿಭಟನೆ
ನಾಡಕಚೇರಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹೋಬಳಿಯ ರೈತರಿಗೆ ತೊಂದರೆಯಾಗುತ್ತಿದೆ. ಹತ್ತು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ ಸಹ ಉಪ ತಹಸೀಲ್ದಾರ್, ತಾಲೂಕಿನ ತಹಸೀಲ್ದಾರ್ ಅಥವಾ ಶಾಸಕರಾಗಲೀ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಎರಡು ದಿನದಲ್ಲಿ ಸಮಸ್ಯೆ ಪರಿಹರಿಸದಿದ್ದರೆ ಹೋಬಳಿಯ ರೈತರು ಮತ್ತು ಸಾರ್ವಜನಿಕರನ್ನು ಸಂಘಟಿಸಿ ಈ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.
- ಎಚ್.ಜೆ.ಬಸವರಾಜು, ಹೊಣಕೆರೆ ಗ್ರಾಪಂ ಅಧ್ಯಕ್ಷರು