ಬೆಂಗಳೂರು(ಅ. 23)  ಹಸು ಸಾಕಲು ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ಪಡೆಯುವ ವಿಚಾರಕ್ಕೆ ಸಂಬಂಧಿಸಿ ಪಶುಸಂಗೋಪನಾ ಷಚಿವ ಪ್ರಭು ಚವ್ಹಾಣ್ ಸ್ಪಷ್ಟನೆ ನೀಡಿದ್ದಾರೆ.

ರೈತರಿಗೆ ತೊಂದರೆ ಆಗಲು ಬಿಡುವುದಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶ  ರಾಜ್ಯದ ರೈತರನ್ನು ಸಂಪಷ್ಟಕ್ಕೆ ಸಿಲುಕಿಸಲಿದೆ. ರಾಜ್ಯದ ಅನೇಕ ರೈತರು ಈ ಆದೇಶದಿಂದ ಆಂತಕಗೊಂಡಿದ್ದಾರೆ. ಈ ಆದೇಶದ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಮ್ಮ ಗಮನಕ್ಕೆ ತಂದಿಲ್ಲ.  ರಾಜ್ಯದ ರೈತರ ಹಿತದೃಷ್ಟಿಯಿಂದ ಈ ನಿರ್ಣಯವನ್ನು ಕೈ ಬಿಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಜಾನುವಾರುಗಳ ಕೊಂಬಿಗೆ ರೇಡಿಯಂ ಸ್ಟಿಕರ್

ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಆಗಲು ಬಿಡುವುದಿಲ್ಲ. ಈ ನಿರ್ಧಾರವನ್ನು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಯಾವ ಆಧಾರದ ಮೇಲೆ ಕೈಗೊಂಡಿದೆ ಎಂದು ತಿಳಿದಿಲ್ಲ. ನಾನು ಅರಣ್ಯ ಸಚಿವರು ಹಾಗೂ ಕಾನೂನು ಸಚಿವರಿಗೂ ಪತ್ರ ಬರೆದಿದ್ದೇನೆ. ಈ ಬಗ್ಗೆ ರೈತಪರವಾದ ತಿರ್ಮಾನ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ ಎಂದು ಸಚಿವರು ಹೇಳಿಕೆ ನೀಡಿದ್ದಾರೆ.