Asianet Suvarna News Asianet Suvarna News

ರಾಸುಗಳ ಚರ್ಮಗಂಟು ರೋಗ ನಿಯಂತ್ರಣಕ್ಕೆ ಚವ್ಹಾಣ್‌ ಸೂಚನೆ

ಇತ್ತೀಚೆಗೆ ರಾಜ್ಯದಲ್ಲಿ ಜಾನುವಾರುಗಳಲ್ಲಿ ಕಂಡುಬರುತ್ತಿರುವ ಚರ್ಮ ಗಂಟು ರೋಗವನ್ನು ಹತೋಟಿಗೆ ತರಲು ಪಶು ವೈದ್ಯಾಧಿಕಾರಿಗಳು ಮತ್ತು ಪಶು ಸಂಗೋಪನೆ ಇಲಾಖೆಯ ಸಿಬ್ಬಂದಿ ಕಾರ್ಯಪ್ರವೃತ್ತರಾಗಬೇಕು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಸೂಚನೆ ನೀಡಿದ್ದಾರೆ.

Prabhu chavans noticed tht control of cattles lumpy skin disease rav
Author
First Published Sep 20, 2022, 12:21 PM IST

ಬೆಂಗಳೂರು (ಸೆ.20) : ಇತ್ತೀಚೆಗೆ ರಾಜ್ಯದಲ್ಲಿ ಜಾನುವಾರುಗಳಲ್ಲಿ ಕಂಡುಬರುತ್ತಿರುವ ಚರ್ಮ ಗಂಟು ರೋಗವನ್ನು ಹತೋಟಿಗೆ ತರಲು ಪಶು ವೈದ್ಯಾಧಿಕಾರಿಗಳು ಮತ್ತು ಪಶು ಸಂಗೋಪನೆ ಇಲಾಖೆಯ ಸಿಬ್ಬಂದಿ ಕಾರ್ಯಪ್ರವೃತ್ತರಾಗಬೇಕು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಸೂಚನೆ ನೀಡಿದ್ದಾರೆ. ಜಾನುವಾರುಗಳಲ್ಲಿ ಕಂಡುಬರುತ್ತಿರುವ ಚರ್ಮಗಂಟು ರೋಗದ ಚಿಕಿತ್ಸೆ ನೀಡುವಲ್ಲಿ ಪಶು ವೈದ್ಯಾಧಿಕಾರಿಗಳು ಸಕಾಲದಲ್ಲಿ ಸ್ಪಂದಿಸುತ್ತಿಲ್ಲ ಎಂದು ರೈತರು ದೂರು ಸಲ್ಲಿಸುತ್ತಿದ್ದಾರೆ. ಪಶುಗಳ ಆರೋಗ್ಯ ವಿಚಾರವಾಗಿ ನಿರ್ಲಕ್ಷ್ಯತನ ತೋರುವ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಶೀಘ್ರದಲ್ಲೇ ಪಶುವೈದ್ಯಕೀಯ ವಿವಿಯ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕ: ಸಚಿವ ಚವ್ಹಾಣ್‌

ಈ ಚರ್ಮಗಂಟು ರೋಗ ಪತ್ತೆಯಾಗಿರುವ ಪ್ರದೇಶಗಳಿಗೆ ತೆರಳಿ ರೈತರಲ್ಲಿ ಜಾಗೃತಿ ಮೂಡಿಸಬೇಕು. ಈ ಬಗ್ಗೆ ಸಹಾಯಕ ನಿರ್ದೇಶಕರು ಮತ್ತು ಉಪ ನಿರ್ದೇಶಕರು ಪರಿಶೀಲನೆ ನಡೆಸಬೇಕು. ಕರ್ತವ್ಯ ನಿರ್ವಹಿಸದ ಪಶುವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದ್ದಾರೆ.

ರೋಗ ನಿರೋಧಕ ಲಸಿಕೆಯನ್ನು 4ರಿಂದ 6 ತಿಂಗಳ ಮೇಲ್ಪಟ್ಟಜಾನುವಾರುಗಳಿಗೆ ಹಾಕುವ ಮೂಲಕ ರೋಗ ಬರದಂತೆ ತಡೆಯಬಹುದಾಗಿದೆ. ಚರ್ಮಗಂಟು ರೋಗ ರೋಗೋದ್ರೇಕಗೊಂಡ ಪ್ರದೇಶಗಳ 5 ಕಿ.ಮೀ ವ್ಯಾಪ್ತಿಯಲ್ಲಿ ವ್ಯಾಪಕ ಲಸಿಕಾ ಕಾರ್ಯಕ್ರಮದ ಮೂಲಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲಾಗುತ್ತಿದೆ. ರೋಗಪೀಡಿತ ರಾಸುಗಳನ್ನು ಆರೋಗ್ಯವಂತ ರಾಸುಗಳಿಂದ ಬೇರ್ಪಡಿಸಿ ಕೂಡಲೇ ಸಮೀಪದ ಪಶು ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆಗೆ ಒಳಪಡಿಸಬೇಕು. ಚಿಕಿತ್ಸೆ ಜತೆಗೆ ಖನಿಜ ಮಿಶ್ರಣ, ರೋಗ ನಿರೋಧಕ ಶಕ್ತಿ ವೃದ್ಧಿಸುವ ಔಷಧಿಗಳನ್ನು ಬಳಸುವುದರಿಂದ ಜಾನುವಾರುಗಳು ನಿಶ್ಯಕ್ತವಾಗುವುದನ್ನು ತಪ್ಪಿಸಬಹುದಾಗಿದೆ ಎಂದು ಸಚಿವರು ಪ್ರಕಟಣೆ ಮೂಲಕ ಸಲಹೆ ನೀಡಿದ್ದಾರೆ.

ಪುಣ್ಯಕೋಟಿ ದತ್ತು ಯೋಜನೆ ಯಶಸ್ಸಿಗೆ ಸಚಿವ ಚವ್ಹಾಣ್‌ ಕರೆ

Follow Us:
Download App:
  • android
  • ios