ಟಿಕೆಟ್‌ ವಿಚಾರವಾಗಿ ಬಿಜೆಪಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಟಿಕೆಟ್‌ ಸಿಗುವ ಭರವಸೆ ಇದೆ| ಇನ್ನೂ ಮೂರು ವರ್ಷ ಅವಧಿ ಇದ್ದು ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಅಭಿವೃದ್ಧಿ, ಹಿಂದುತ್ವದ ಕೆಲಸ ಮಾಡುತ್ತೇನೆ: ಮುತಾಲಿಕ್‌| 

ಬಾಗಲಕೋಟೆ(ಮಾ.07): ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸುವ ಇಚ್ಛೆಯನ್ನು ಹೊಂದಿದ್ದೇನೆ. ಈ ಕುರಿತು ಬಿಜೆಪಿಗೆ ಮನವಿ ಸಹ ಮಾಡಿಕೊಂಡಿದ್ದೇನೆ. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಈಗಾಗಲೇ ನನಗೆ 66 ವರ್ಷ ವಯಸ್ಸಾಗಿದೆ ಎಂದು ಶ್ರೀರಾಮಸೇನಾ ಮುಖಂಡ ಪ್ರಮೋದ್‌ ಮುತಾಲಿಕ್‌ ತಿಳಿಸಿದ್ದಾರೆ. 

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್‌ ವಿಚಾರವಾಗಿ ಬಿಜೆಪಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಟಿಕೆಟ್‌ ಸಿಗುವ ಭರವಸೆ ಇದೆ. ಇನ್ನೂ ಮೂರು ವರ್ಷ ಅವಧಿ ಇದ್ದು ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಅಭಿವೃದ್ಧಿ, ಹಿಂದುತ್ವದ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಬಾಗಲಕೋಟೆ: ಚಿಲ್ಲರೆ ಕೇಳುವ ನೆಪದಲ್ಲಿ 50 ಸಾವಿರ ದೋಚಿ ಪರಾರಿ

ಒಂದು ವೇಳೆ ಟಿಕೆಟ್‌ ಸಿಗದೆ ಸುರೇಶ್‌ ಅಂಗಡಿಯವರ ಕುಟುಂಬಕ್ಕೋ, ಜಗದೀಶ್‌ ಶೆಟ್ಟರ್‌ ಕುಟುಂಬಕ್ಕೋ ಕೊಟ್ಟರೆ ಅವರು ನನ್ನನ್ನು ಪ್ರಚಾರಕ್ಕೆ ಕರೆದರೆ ಅವರ ಪರವಾಗಿ ಚುನಾವಣೆ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.