ವಿಧಾನಸೌಧದಲ್ಲಿ ನಮಾಜ್‌ಗೆ ಅವಕಾಶ ಕೊಟ್ಟರೆ ಕರ್ನಾಟಕ ಹೊತ್ತಿ ಉರಿಯುತ್ತೆ: ಪ್ರಮೋದ ಮುತಾಲಿಕ್‌

ಸಮಾನ ನಾಗರಿಕ ಸಂಹಿತೆ ಜಾರಿಗೆ ಶ್ರೀರಾಮಸೇನೆ ಬೆಂಬಲ ನೀಡಲಿದೆ. ಜುಲೈ 18ರಿಂದ ಜಿಲ್ಲಾ ಕೇಂದ್ರಗಳಲ್ಲಿ ಸಹಿ ಅಭಿಯಾನ ಆರಂಭಿಸಿ, 5 ಲಕ್ಷ ಜನರ ಸಹಿ ಸಂಗ್ರಹಿಸಿ, ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ 

Pramod Mutalik Talks Over Namaz in Vidhana Soudha grg

ಧಾರವಾಡ(ಜು.15): ವಿಧಾನಸೌಧದಲ್ಲಿ ನಮಾಜ್‌ ಮಾಡಲು ಕೊಠಡಿ ಕೊಡಿ ಎಂದು ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯರೊಬ್ಬರು ಬೇಡಿಕೆ ಇಟ್ಟಿದ್ದಾರೆ. ಸರ್ಕಾರವೇನಾದರೂ ಇದಕ್ಕೆ ಅವಕಾಶ ಕೊಟ್ಟರೆ ರಾಜ್ಯ ಹೊತ್ತಿ ಉರಿಯುತ್ತೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಎಚ್ಚರಿಕೆ ನೀಡಿದ್ದಾರೆ. 

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ನ ಕಣ, ಕಣದಲ್ಲೂ ಹಿಂದೂ ವಿರೋಧಿ ಗುಣವಿದೆ. ಕಾಂಗ್ರೆಸ್‌ನ ತುಷ್ಟೀಕರಣದ ಫಲವಾಗಿ ಅವರು ನಿರ್ಭಯವಾಗಿ ಕೊಠಡಿ ಕೇಳಿದ್ದಾರೆ. ವಿಧಾನಸೌಧ ಮಕ್ಕಾ-ಮದೀನಾ ಅಲ್ಲ. ಪ್ರಜಾಪ್ರಭುತ್ವದ ಆಧಾರದ ದೇಗುಲ. ಅಲ್ಲಿ ನಮಾಜ್‌ ಮಾಡುತ್ತೇವೆ, ಬುರ್ಕಾ ಹಾಕಿಕೊಂಡು ಬರುತ್ತೇವೆ, ಮೈಕ್‌ ಹಾಕುತ್ತೇವೆ ಎಂದು ಕೇಳಿದರೆ ಸಿದ್ದರಾಮಯ್ಯನವರು ಅನುಮತಿ ಕೊಟ್ಟರೂ ಅಚ್ಚರಿ ಏನಿಲ್ಲ. ಹಾಗೇನಾದರೂ ಅವಕಾಶ ನೀಡಿದರೆ ರಾಜ್ಯ ಹೊತ್ತಿ ಉರಿಯುತ್ತೆ. ಶ್ರೀರಾಮ ಸೇನೆಯ ಸಾವಿರಾರು ಕಾರ್ಯಕರ್ತರು ಇದರ ವಿರುದ್ಧ ಹೋರಾಟ ನಡೆಸಿ, ನಿತ್ಯ ವಿಧಾನಸೌಧದಲ್ಲಿ ಹನುಮಾನ್‌ ಚಾಲೀಸಾ, ಭಜನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರಚೋದನಕಾರಿ ಭಾಷಣ: ಮುತಾಲಿಕ್‌ ವಿರುದ್ಧದ ಪ್ರಕರಣ ರದ್ದುc

ಸಮಾನ ನಾಗರಿಕ ಸಂಹಿತೆ ಜಾರಿಗೆ ಶ್ರೀರಾಮಸೇನೆ ಬೆಂಬಲ ನೀಡಲಿದೆ. ಜುಲೈ 18ರಿಂದ ಜಿಲ್ಲಾ ಕೇಂದ್ರಗಳಲ್ಲಿ ಸಹಿ ಅಭಿಯಾನ ಆರಂಭಿಸಿ, 5 ಲಕ್ಷ ಜನರ ಸಹಿ ಸಂಗ್ರಹಿಸಿ, ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.

Latest Videos
Follow Us:
Download App:
  • android
  • ios