ವಿಜಯಪುರ (ಫೆ.28): ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಬಿಜೆಪಿಯಿಂದ ಟಿಕೆಟ್‌ ನೀಡಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್‌ ಮನವಿ ಮಾಡಿ​ದ್ದಾರೆ. 

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಸುರೇಶ ಅಂಗಡಿ ಅವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಹೊಂದಿದ್ದು, ಈ ಸಂಬಂಧ ನಾನು ಈಗಾಗಲೇ ಬಿಜೆಪಿ ನಾಯಕರಿಗೆ ಮನವಿ ಮಾಡಿರುವು​ದಾ​ಗಿ ತಿಳಿ​ಸಿ​ದರು. 

ಬಾಬರ್‌ ಅನುಯಾಯಿಗಳಾದ PFI ಸಂಘಟನೆಯವರು ರಾಕ್ಷಸ ಕುಲದವರು: ಮುತಾಲಿಕ್‌ ...

ಇನ್ನು ಮೂರು ವರ್ಷ ಅವಧಿಯಲ್ಲಿ ನಾನು ಜನಸೇವೆ ಸಲ್ಲಿಸಲು ಬಯಸಿದ್ದು ಬಿಜೆಪಿ ಹೈಕಮಾಂಡ್‌ ನನಗೆ ಅವಕಾಶ ಕಲ್ಪಿಸಿ ಕೊಡಬೇಕು. ಒಂದು ವೇಳೆ ನನಗೆ ಅವಕಾಶ ಕೊಡದಿದ್ದರೂ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ ಎಂದರು.