Praveen Nettaru Murder Case :ಕೊಲೆಗಡುಕರಿಗೆ ಕಂಡಲ್ಲಿ ಗುಂಡಿಕ್ಕಿ: ಉಮೇಶ

ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಆರೋಪಿಗಳಿಗೆ ಕಂಡಲ್ಲಿ ಗುಂಡಿಕ್ಕುವಂತೆ ಬಿಜೆಪಿ ಮುಖಂಡ ಆಗ್ರಹಿಸಿದ್ದಾರೆ. ಅಲ್ಲದೆ ಸರ್ಕಾರದ ವಿರುದ್ಧ ಆಕ್ರೋಶಗೊಂಡು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ

Praveen Murder Case; shot on sight to the accused says umesh koppala rav

ಕುಷ್ಟಗಿ (ಜು.29): ಪ್ರವೀಣ್‌ ನೆಟ್ಟಾರು ಹತ್ಯೆ ಮಾಡಿದವರನ್ನು ಕಂಡಲ್ಲಿ ಗುಂಡಿಕ್ಕಬೇಕು ಎಂದು ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಉಮೇಶ್‌ ಯಾದವ ಅಗ್ರೇಜಿ ಆಗ್ರಹಿಸಿದರು ಬುಧವಾರ ರಾತ್ರಿ ಇಲ್ಲಿನ ಮಾರುತಿ ವೃತ್ತದಲ್ಲಿ ಪ್ರವೀಣ ನೆಟ್ಟಾರು ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿ, ಸರ್ಕಾರದ ಮೃದು ಧೋರಣೆಯಿಂದ ಇಂತಹ ಪ್ರಕರಣಗಳು ಮರುಕಳಿಸುತ್ತಿವೆ ಎಂದರು. ಹಲವಾರು ಕಾರ್ಯಕರ್ತರ ಕೊಲೆಯಾಗಿದ್ದರೂ ಕಾರಣರಾದವರಿಗೆ ಇನ್ನೂ ಶಿಕ್ಷೆ ವಿಧಿಸಿಲ್ಲ. ಇಂತಹ ಘಟನೆಗಳು ರಾಜ್ಯದಲ್ಲಿ ಮರುಕಳಿಸದಂತೆ ಎಚ್ಚರ ವಹಿಸಬೇಕು. ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳದೇ ಹೋದರೆ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಎಚ್ಚರಿಸಿದರು.

ಬಿಜೆಪಿ ಮುಖಂಡ ಮಲ್ಲಣ್ಣ ಪಲ್ಲೇದ(BJP Leader Mallanna Palled) ಮಾತನಾಡಿ, ಕಳೆದ ಹಲವು ದಿನಗಳಿಂದ ಹಿಂದೂಪರ ಸಂಘಟನೆಗಳ ಮುಖಂಡರ ಹತ್ಯೆ ಪ್ರಕರಣ ನಡೆಯುತ್ತಿದ್ದರೂ ಸರ್ಕಾರ ಯಾವುದೇ ಕಠಿಣ ನಿರ್ಧಾರಕ್ಕೆ ಮುಂದಾಗುತ್ತಿಲ್ಲ. ಸರ್ಕಾರ ನಿರ್ಲಕ್ಷ್ಯ ಧೋರಣೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.  ಶ್ರೀಕಾಂತ ಕಿರಗಿ, ಬಸವರಾಜ, ಭೀಮಣ್ಣ ಬಿಜಕಲ…, ಯಮನೂರಪ್ಪ ಸೇರಿದಂತೆ ಇತರರು ಇದ್ದರು.

ಪ್ರವೀಣ್ ಹತ್ಯೆ, ಹಿಂದೂ ಕಾರ್ಯಕರ್ತರ ಅಕ್ರೋಶ, ಬಿಜೆಪಿ ನಾಯಕರು ಸೈಲೆಂಟ್

22 ಪದಾಧಿಕಾರಿಗಳ ರಾಜೀನಾಮೆ

ಬಿಜೆಪಿ ಯುವ ಮುಖಂಡ ಪ್ರವೀಣ ಹತ್ಯೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಉಮೇಶ ಯಾದವ ಅಗ್ರೇಜಿ ಸೇರಿದಂತೆ ಘಟಕದ ಎಲ್ಲ 22 ಪದಾಧಿಕಾರಿಗಳು ಗುರುವಾರ ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ. ರಾಜೀನಾಮೆ ಪತ್ರವನ್ನು ಬಿಜೆಪಿ ತಾಲೂಕು ಉಪಾಧ್ಯಕ್ಷ ಜಿ.ಕೆ. ಹಿರೇಮಠ ಅವರಿಗೆ ರವಾನಿಸಿದ್ದಾರೆ.

*ಪ್ರವೀಣ್‌ ಹತ್ಯೆ; ಸಿ.ವಿ. ಚಂದ್ರಶೇಖರ:

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣವನ್ನು ಬಿಜೆಪಿ ರಾಷ್ಟ್ರೀಯ ಪರಿಷತ್‌ ಸದಸ್ಯ ಸಿ.ವಿ. ಚಂದ್ರಶೇಖರ ಅವರು ಖಂಡಿಸಿದ್ದಾರೆ. ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಮೂಡಿಸಲು ಕೆಲವರು ಇಂತಹ ಹೇಯ ಕೃತ್ಯ ಎಸಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂ ಯುವಕರು ಧೃತಿಗೆಡಬಾರದು. ಬಿಜೆಪಿ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲಿದೆ ಎಂದು ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದುಷ್ಕೃತ್ಯದಲ್ಲಿ ಎಸಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಬಿಜೆಪಿ ಯುವಮೋರ್ಚಾ ಬಲಿಷ್ಠವಾಗಿದೆ. ಕಾರ್ಯಕರ್ತರನ್ನು ವಿಚಲಿತಗೊಳಿಸುವ ಹುನ್ನಾರದಿಂದ ಇಂತಹ ಕೃತ್ಯಗಳು ಜರುಗುತ್ತಿದ್ದು, ಯುವ ಮೋರ್ಚಾ ಸೇರಿ ಬಿಜೆಪಿ ವಿವಿಧ ವಿಭಾಗದ ಪದಾಧಿಕಾರಿಗಳು ರಾಜೀನಾಮೆ ನಿರ್ಧಾರವನ್ನು ಕೈಬಿಡಬೇಕು. ಸರ್ಕಾರ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುತ್ತಿದೆ. ಆದ್ದರಿಂದ ಯುವ ಕಾರ್ಯಕರ್ತರು ಒಟ್ಟಾಗಿ ನಿಲ್ಲಬೇಕು ಎಂದು ತಿಳಿಸಿದರು.

ಪ್ರವೀಣ್ ಹತ್ಯೆ ಖಂಡಿಸಿ ಸಾಮೂಹಿಕ ರಾಜಿನಾಮೆಗೆ ಮುಂದಾದ ಚಿಕ್ಕಮಗಳೂರು ಯುವ ಮೋರ್ಚಾ ಸದಸ್ಯರು

ಪ್ರವೀಣ್‌ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಬಿಜೆಪಿ ಕಾರ್ಯಕರ್ತರು ಶಾಂತಿಯಿಂದ ವರ್ತಿಸಬೇಕು. ಪ್ರತಿಭಟನೆಗೆ ನಮ್ಮ ಬೆಂಬಲವೂ ಇದೆ. ಬಿಜೆಪಿ ಕಾರ್ಯಕರ್ತರು ಪಕ್ಷದ ಸಿದ್ಧಾಂತಕ್ಕೆ ಧಕ್ಕೆ ಬಾರದಂತೆ ಹೋರಾಟ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Latest Videos
Follow Us:
Download App:
  • android
  • ios