ಉದ್ಯೋಗ ಆಧಾರಿತ ಯೋಜನೆಗೆ ಆದ್ಯತೆ: ಸಿಎಂ ಬೊಮ್ಮಾ​ಯಿ

*  ಕೈಗಾರಿಕೆ ಸ್ಥಾಪನೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಬೇಕು 
*  ಗ್ರಾಮ ಮಟ್ಟದಲ್ಲಿ ಸರ್ಕಾರಿ ಸೇವೆಗಳು ಸಿಗುವಂತೆ ಮಾಡಿ ಜನಸ್ನೇಹಿ ಆಡಳಿತ ನೀಡುವುದು ಗುರಿ
*  ಜನ ಲಸಿಕೆ ಪ್ರಯೋ​ಜನ ಪಡೆ​ಯ​ಬೇ​ಕು
 

Preference for a job based project Says CM Basavaraj Bommai grg

ಹಾವೇರಿ(ಸೆ.02): ನಿರುದ್ಯೋಗ ನಿವಾರಣೆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಅದಕ್ಕಾಗಿ ಉದ್ಯೋಗ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಲು ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಶಿಗ್ಗಾಂವಿ ತಾಲೂಕು ಬಾಡ ಗ್ರಾಮದ ಅಟಲ್‌ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಂತ್ರಿಕ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ದೊರಕಬೇಕಿದೆ. ಅದಕ್ಕಾಗಿ ಅನೇಕ ಉದ್ಯಮಪತಿಗಳೊಂದಿಗೆ ಮಾತನಾಡಿದ್ದು, ಸರ್ಕಾರ ಕೈಗಾರಿಕೆ ಸ್ಥಾಪನೆಗೆ ಬೇಕಾದಷ್ಟುಬಂಡವಾಳ ಹೂಡಲು ಯಾವುದೇ ಸಮಸ್ಯೆ ಇಲ್ಲ. ಆದರೆ, ಕೈಗಾರಿಕೆ ಸ್ಥಾಪನೆಯಿಂದ ಎಷ್ಟುಜನರಿಗೆ ಉದ್ಯೋಗ ಕೊಡುತ್ತೀರಿ? ತಂತ್ರಜ್ಞಾನವನ್ನು ಯಾವ ರೀತಿ ಬಳಕೆ ಮಾಡುತ್ತೀರಿ? ಎಂದು ಕೇಳಿದ್ದೇನೆ.

ನಮ್ಮ ಸರ್ಕಾರ ಉದ್ಯೋಗ ಆಧಾರಿತ ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡಲಿದೆ. ಕಾಲ ಬದಲಾದಂತೆ ನಮ್ಮ ದೃಷ್ಟಿಕೋನ, ಚಿಂತನೆಯಲ್ಲಿ ಬದಲಾಗಬೇಕು. ನಮ್ಮ ಯುವಕರ ಕೈಗೆ ಕೆಲಸ ನೀಡುವ ಕೈಗಾರಿಕೆ ಸ್ಥಾಪನೆಯಾಗಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಡೆದಿದೆ ಎಂದು ತಿಳಿ​ಸಿ​ದರು.

ಆಡಳಿತದಲ್ಲಿ ಚುರುಕು:

ಆಡಳಿತದಲ್ಲಿ ಚುರುಕು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ವಿಶೇಷವಾಗಿ ಜನಸಾಮಾನ್ಯರಿಗೆ ಕಚೇರಿಗಳ ಅಲೆದಾಟ ತಪ್ಪಬೇಕು. ಅದಕ್ಕಾಗಿ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಉದ್ದೇಶಿಸಲಾಗಿದೆ. ಅದಕ್ಕೆ ಬೇಕಾದ ಡಿಜಿಟಲ್‌ ನೆಟವರ್ಕ್ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು.

ಜಲವಿವಾದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ: ಸಿಎಂ ಬೊಮ್ಮಾಯಿ

ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಿಗುವ ಎಲ್ಲ ಸೇವೆಗಳು ಗ್ರಾಮ ಮಟ್ಟದಲ್ಲಿ ಸಿಗುವ ರೀತಿ ಪ್ರಯತ್ನ ಮಾಡುಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಇದನ್ನೇ ತಿಳಿಸಿದ್ದೇನೆ. ರಾಜ್ಯದಲ್ಲಿ ಜನಸ್ನೇಹಿ ಆಡಳಿತ ನೀಡಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ:

ವಸತಿ ಶಾಲೆಗಳಿಗೆ ದೊಡ್ಡ ಪ್ರಮಾಣದಲ್ಲಿ ಕಟ್ಟಡಕ್ಕಾಗಿ ಅನುದಾನ ನೀಡುತ್ತಿದ್ದೇವೆ. ಅದೇ ರೀತಿ ಅಲ್ಲಿ ಮೂಲಸೌಕರ್ಯ ಒದಗಿಸಬೇಕಿದೆ. ಎಸ್ಸಿ ಎಸ್ಟಿ, ಒಬಿಸಿ ಅಲ್ಪಸಂಖ್ಯಾತರಿಗಾಗಿ ಇರುವ ಈ ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗಬೇಕಿದೆ. ವಸತಿ ಶಾಲೆಗಳ ಗುಣಮಟ್ಟಸಿಬಿಎಸ್‌ಸಿ ಮಟ್ಟದಲ್ಲಿ ಆಗಬೇಕು. ಈ ಬಗ್ಗೆ ಇಲಾಖೆ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದೇನೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ವಸತಿ ಶಾಲೆಗಳಿಗೆ ಪ್ರವೇಶ ನೀಡಲಾಗುತ್ತದೆ. ಅವರಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕಿದೆ. ಅದಕ್ಕಾಗಿ ನಮ್ಮ ನೀತಿಯನ್ನೇ ಬದಲಾಯಿಸುವ ಅವಶ್ಯಕತೆಯಿದೆ ಎಂದು ಹೇಳಿದರು.

ಸಾಮಾ​ನ್ಯ​ರಿಗೂ ಮರಳು ಲಭ್ಯ​ವಾ​ಗ​ಬೇ​ಕು

ಜನಸಾಮಾನ್ಯರಿಗೆ ಸುಲಭವಾಗಿ ಮರಳು ಲಭ್ಯವಾಗುಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿ​ದರು. ಈ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮರಳುಗಾರಿಕೆ ಗೊಂದಲದಲ್ಲಿ ಸಿಲುಕಿಕೊಂಡಿದೆ. ಆ ಗೊಂದಲ ನಿವಾರಿಸಿ ಜನರಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಗಣಿ ಸಚಿವರಿಗೂ ಸೂಚನೆ ನೀಡಿದ್ದೇನೆ. ಯಾವ ರೀತಿ ಜನರಿಗೆ, ಸರ್ಕಾರಿ ಕಾಮಗಾರಿಗಳಿಗೆ ಮರಳು ಸುಲಭವಾಗಿ ಸಿಗುವಂತೆ ಮಾಡಬೇಕು ಎಂಬುದರ ಬಗ್ಗೆ ಸ್ಪಷ್ಟರೂಪುರೇಷ ಸಿದ್ಧಪಡಿಸಲಾಗುವುದು ಎಂದು ಸ್ಪಷ್ಟ​ಪ​ಡಿ​ಸಿ​ದ​ರು.

ಜನ ಲಸಿಕೆ ಪ್ರಯೋ​ಜನ ಪಡೆ​ಯ​ಬೇ​ಕು

ಲಸಿಕೆ ಹಾಕಿಸಿಕೊಳ್ಳದಿದ್ದರೆ ರೇಶನ್‌ ಇಲ್ಲ ಎಂಬ ನಿಯಮಕ್ಕೆ ಪ್ರತಿಕ್ರಿಯಿಸಿದ ಸಿಎಂ, ಇದನ್ನು ನಾನು ಒಪ್ಪುವುದಿಲ್ಲ. ಈಗ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಲಸಿಕೆ ಬರುತ್ತಿದೆ. ಇದರ ಉಪಯೋಗವನ್ನು ಜನರು ಪಡೆಯಬೇಕು. ಸಾರ್ವಜನಿಕರ ಆರೋಗ್ಯಕ್ಕಾಗಿ ಇದನ್ನು ಮಾಡುತ್ತಿದ್ದೇವೆ. ಒಂದೆರಡು ಜಿಲ್ಲೆಗಳಲ್ಲಿ ಸಮಸ್ಯೆಯಿದೆ. ಜನರಿಗೆ ತಿಳಿಸಿ ಮನವರಿಕೆ ಮಾಡಿಕೊಟ್ಟು ಎಲ್ಲರಿಗೂ ಸಲಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿ​ಸಿ​ದ​ರು.
 

Latest Videos
Follow Us:
Download App:
  • android
  • ios