ಕ್ಷಣ ಕ್ಷಣಕ್ಕೂ ಕೆಆರ್‌ಎಸ್ ಡ್ಯಾಂಗೆ ಒಳಹರಿವು ಹೆಚ್ಚಳ: 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ..!
ಕೆಆರ್‌ಎಸ್ ಜಲಾಶಯ ಈಗಾಗಲೇ ಸಂಪೂರ್ಣವಾಗಿ ಭರ್ತಿಯಾಗಿದೆ. ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ 70 ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗಿತ್ತು. ಕೆಲವೇ ಕ್ಷಣದಲ್ಲಿ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗುತ್ತದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮಂಡ್ಯ(ಜು.25): ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕ್ಷಣ ಕ್ಷಣಕ್ಕೂ ಹೆಚ್ಚಳವಾಗುತ್ತಿರೋ ಕೆಆರ್‌ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಕೆಆರ್‌ಎಸ್ ಡ್ಯಾಂನಿಂದ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಕಾವೇರಿ ನದಿ ಪಾತ್ರದಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ.
ಕೆಆರ್‌ಎಸ್ ಜಲಾಶಯ ಈಗಾಗಲೇ ಸಂಪೂರ್ಣವಾಗಿ ಭರ್ತಿಯಾಗಿದೆ. ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ 70 ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗಿತ್ತು. ಕೆಲವೇ ಕ್ಷಣದಲ್ಲಿ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗುತ್ತದೆ.
ಕೆಆರ್‌ಎಸ್ ಆಣೆಕಟ್ಟು ಶೇ.100 ಭರ್ತಿ; ರೈತರ ಮೊಗದಲ್ಲಿ ಸಂತಸ, ಕಾವೇರಿ ನದಿ ಪಾತ್ರಗಳಲ್ಲಿ ಪ್ರವಾಹದ ಆತಂಕ
ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನದಿಗೆ ಇಳಿಯದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ನದಿ ದಡದಲ್ಲಿದ್ದರೇ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮನವಿ ಮಾಡಲಾಗಿದೆ.