ಮಂಗಳೂರು(ಮೇ 26): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪದಗ್ರಹಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಸೇರಿದಂತೆ ಮುಖಂಡರ ಸಭೆ ಸೋಮವಾರ ನಡೆಯಿತು.

ಡಿ.ಕೆ. ಶಿವಕುಮಾರ್‌ ಪದಗ್ರಹಣ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್‌, ಬ್ಲಾಕ್‌ ಕಾಂಗ್ರೆಸ್‌ ಕಚೇರಿಗಳು ಹಾಗೂ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ, ಮಹಾನಗರ ಪಾಲಿಕೆಯ 60 ವಾರ್ಡ್‌ಗಳಲ್ಲಿ ನೇರಪ್ರಸಾರ ವೀಕ್ಷಣೆಗೆ ಅವಕಾಶ ಕಲ್ಪಿಸುವ ಕುರಿತು ಚರ್ಚಿಸಲಾಯಿತು.

ಸಹ್ಯಾದ್ರಿಯಲ್ಲಿ ಸೆನ್ಸಾರ್‌ ಆಧಾರಿತ ಸ್ಯಾನಿಟೈಸರ್‌ ತಯಾರಿ

ಮಾಜಿ ಸಚಿವ ಬಿ. ರಮಾನಾಥ ರೈ, ಅಭಯಚಂದ್ರ ಜೈನ್‌, ಐವನ್‌ ಡಿಸೋಜ, ಮೊಹಿಯುದ್ದೀನ್‌ ಬಾವ, ಶಕುಂತಳಾ ಶೆಟ್ಟಿ, ಇಬ್ರಾಹಿಂ ಕೋಡಿಜಾಲ…, ಮಿಥುನ್‌ ರೈ, ಪಾಲಿಕೆ ವಿಪಕ್ಷ ನಾಯಕ ಅಬ್ದುಲ್‌ ರವೂಫ್‌, ಜಲ್ಲಾ ಕಾಂಗ್ರೆಸ್‌ ಪದಾಧಿಕಾರಿಗಳು ಇದ್ದರು.