ಮೌಲ್ಯಯುತ ಶಿಕ್ಷಣಕ್ಕೆ ಆದ್ಯತೆ ನೀಡಿ: ನಂಜಾವಧೂತ ಶ್ರೀ
ಜೀವನದ ಮೌಲ್ಯಯುತ ಶಿಕ್ಷಣಕ್ಕೆ ಆದ್ಯತೆ ನೀಡಿ ಶಿಕ್ಷಣ ಕೊಡಿಸಬೇಕು. ಆಗ ಮಕ್ಕಳ ಏಳಿಗೆ ಜೊತೆಗೆ ಗುರು ಹಿರಿಯರನ್ನು ಗೌರವಿಸುವಂತಹ ಸಂಸ್ಕಾರದೊಂದಿಗೆ ಒಬ್ಬ ಪರಿಪೂರ್ಣ ವ್ಯಕ್ತಿಯಾಗಿ ಸಮಾಜದಲ್ಲಿ ಗೌರವಿಸಲ್ಪಡುತ್ತಾನೆ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
ಶಿರಾ : ಜೀವನದ ಮೌಲ್ಯಯುತ ಶಿಕ್ಷಣಕ್ಕೆ ಆದ್ಯತೆ ನೀಡಿ ಶಿಕ್ಷಣ ಕೊಡಿಸಬೇಕು. ಆಗ ಮಕ್ಕಳ ಏಳಿಗೆ ಜೊತೆಗೆ ಗುರು ಹಿರಿಯರನ್ನು ಗೌರವಿಸುವಂತಹ ಸಂಸ್ಕಾರದೊಂದಿಗೆ ಒಬ್ಬ ಪರಿಪೂರ್ಣ ವ್ಯಕ್ತಿಯಾಗಿ ಸಮಾಜದಲ್ಲಿ ಗೌರವಿಸಲ್ಪಡುತ್ತಾನೆ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
ಅವರು ತಾಲೂಕಿನ ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದಲ್ಲಿ ನಡೆದ ಪೌರ್ಣಮಿ ದೀಪೋತ್ಸವ ಮತ್ತು ಸತ್ಸಂಗ ಕಾರ್ಯಕ್ರಮದಲ್ಲಿ ಭಕ್ತರಿಗೆ ಆರ್ಶೀವಚನ ನೀಡಿದರು.
ಭಗವಂತನಿಗೆ ದೀಪ ಹಚ್ಚಿ, ಬೆಳಕಿನಲ್ಲಿ ದೇವರನ್ನು ಕಾಣುವಂತಾಗಬೇಕು. ಚಂದ್ರಪೂರ್ಣ ಪ್ರಮಾಣದ ದರ್ಶನ ಬೆಳಕು ನೀಡುತ್ತಾನೋ ಅದೇ ರೀತಿ ಮನುಷ್ಯನ ಬದುಕು ಕೂಡ ಬೆಳಕಿನ ಪೂರ್ಣ ಪ್ರಮಾಣತೆಯಲ್ಲಿದ್ದರೆ ಜೀವನ ಸುಂದರ ರೂಪದಲ್ಲಿರಲಿದೆ. ತಂದೆ-ತಾಯಂದಿರು ಮಕ್ಕಳಿಗೆ ಕೇವಲ ಅಂಕ ಗಳಿಸುವ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿದೆ, ಪ್ರಸ್ತುತ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬದುಕುವ ಜೀವನ ಕಲೆಯನ್ನು ಕಲಿಸುವಂತಹ ಶಿಕ್ಷಣ ಅಗತ್ಯವಿದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಎಂ. ಶ್ರೀನಿವಾಸ್, ಕ್ಯಾದಿಗುಂಟೆ ನರಸಿಂಹಯ್ಯ, ತಮ್ಮಣ್ಣ, ನಿರಂಜನ್, ಈ ಮಂಜುನಾಥ ಗುಪ್ತ, ನಿವೃತ್ತ ಶಿಕ್ಷಕ ರಾಮಣ್ಣ , ಕುಮಾರ್ ಸೇರಿದಂತೆ ಹಲವಾರು ಭಕ್ತರು ಹಾಜರಿದ್ದರು.