ಗುಣಮಟ್ಟದ ಶಿಕ್ಷಣ ಶಾಲೆಗಳ ಆದ್ಯತೆಯಾಗಲಿ: ಸೂರ್ಯಕಲಾ
ಶಾಲಾ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಶಿಕ್ಷಕರು, ಇಲಾಖೆ ಸಿಬ್ಬಂದಿ ಕಾಳಜಿಯಿಂದ ಕೆಲಸ ಮಾಡಬೇಕು. ಗುಣಮಟ್ಟದ ಶಿಕ್ಷಣ ಶಾಲೆಗಳ ಆದ್ಯತೆಯಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಸೂರ್ಯಕಲಾ ಹೇಳಿದರು.
ತುಮಕೂರು: ಶಾಲಾ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಶಿಕ್ಷಕರು, ಇಲಾಖೆ ಸಿಬ್ಬಂದಿ ಕಾಳಜಿಯಿಂದ ಕೆಲಸ ಮಾಡಬೇಕು. ಗುಣಮಟ್ಟದ ಶಿಕ್ಷಣ ಶಾಲೆಗಳ ಆದ್ಯತೆಯಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಸೂರ್ಯಕಲಾ ಹೇಳಿದರು.
ತಾಲೂಕಿನ ಕೋರಾ ಹೋಬಳಿ ಬಸಪ್ಪನ ಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಿಆರ್‌ಪಿ, ಬಿಆರ್‌ಸಿ, ಇಸಿಇಗಳು ತಾವು ಭೇಟಿ ನೀಡುವ ಶಾಲೆಯಲ್ಲಿ ದಿನವಿಡೀ ಉಳಿದು ಶಾಲೆಯ ಶೈಕ್ಷಣಿಕ ಚಟುವಟಿಕೆ, ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಶಿಕ್ಷಕರಿಗೆ ಅಗತ್ಯ ಮಾರ್ಗಸೂಚನೆ ನೀಡಬೇಕು ಎಂದು ಹೇಳಿದರು.
ಬಸಪ್ಪನ ಪಾಳ್ಯ ಶಾಲೆ 1930 ರಲ್ಲಿ ಪ್ರಾರಂಭವಾಗಿದೆ. ಶಾಲೆಯ ಇತಿಹಾಸ, ಕೊಡುಗೆ ಸ್ಮರಿಸಬೇಕು. ಇಂತಹ ಸರ್ಕಾರಿ ಶಾಲೆಗಳ ಸಂರಕ್ಷಣೆಗೆ, ಪೋಷಕರ ಸಲಹೆ ಸಹಕಾರ ಪಡೆಯಬೇಕು ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬೆಟ್ಟಪ್ಪ, ಬಿಆರ್‌ಸಿ ಗಾಯತ್ರಿ, ಇಸಿಒ ಚಂದ್ರಶೇಖರ್, ಶಿವರಾಜ್, ಮಂಜುನಾಥ್, ನವೀನ್ ಕುಮಾರ್, ನಟರಾಜು, ನಾಗಭೂಷಣ್ ಭಾಗವಹಿಸಿದ್ದರು.
ರಾಮಮಂದಿರ ಉದ್ಘಾನೆಗೆ ಶಾಲೆಗೆ ರಜೆ
ಲಖನೌ(ಜ.09) ರಾಮ ಮಂದಿರ ಲೋಕಾರ್ಪಣೆಗೆ ತಯಾರಿ ನಡೆಯುತ್ತಿದೆ. ಜನವರಿ 22 ರಂದು ರಾಮಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ. ಐತಿಹಾಸಿಕ ದಿನಕ್ಕಾಗಿ ವಿಶ್ವವೇ ಕಾಯುತ್ತಿದೆ. ರಾಮ ಮಂದಿರ ಪ್ರಾಣಪ್ರತಿಷ್ಠೆದಿನ ಉತ್ತರ ಪ್ರದೇಶದ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇಷ್ಟೇ ಅಲ್ಲ ಪ್ರಾಣ ಪ್ರತಿಷ್ಠೆ ದಿನ ಉತ್ತರ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ಮಹತ್ವದ ಆದೇಶವನ್ನು ಸಿಎಂ ಯೋಗಿ ಆದಿತ್ಯನಾಥ್ ಹೊರಡಿಸಿದ್ದಾರೆ. ಇದೇ ವೇಳೆ ಪ್ರಾಣಪ್ರತಿಷ್ಠೆಯ ಐತಿಹಾಸಿಕ ದಿನ ಶಾಂತಿಯುತವಾಗಿ ಸಂಭ್ರಮಿಸಲು ಮನವಿ ಮಾಡಿದ್ದಾರೆ.
500 ವರ್ಷಗಳ ಹೋರಾಟದ ಬಳಿಕ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಈ ಐತಿಹಾಸಿಕ ದಿನ ನಮ್ಮೆಲ್ಲರಿಗೂ ಅತ್ಯಂತ ಮಹತ್ವ ಹಾಗೂ ಸಂಭ್ರಮದ ದಿನವಾಗಿದೆ. ಈ ದಿನವನ್ನು ಆಚರಿಸಲು ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಎಂದು ಯೋಗಿ ಆದಿತ್ಯನಾಥ್, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಶ್ರೀರಾಮ ಪ್ರಾಣಪ್ರತಿಷ್ಠೆ ಅತ್ಯಂತ ಪವಿತ್ರವಾಗಿದೆ. ಹೀಗಾಗಿ ಈ ದಿನ ಉತ್ತರ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧಿಸಲು ಆದೇಶ ಹೊರಡಿಸಲಾಗಿದೆ.
ರಾಮ ಮಂದಿರ ಪ್ರಾಣಪ್ರತಿಷ್ಠೆ ಬೆನ್ನಲ್ಲೇ ಘಾಜಿಯಾಬಾದ್ ಮರುನಾಮಕರಣಕ್ಕೆ ಸಜ್ಜಾದ ಯೋಗಿ ಸರ್ಕಾರ!
ಸಾರ್ವಜನಿಕರು ರಾಮ ಮಂದಿರ ಪ್ರಾಣಪ್ರತಿಷ್ಠೆಯನ್ನು ಸಂಭ್ರಮಿಸಲು ಕೆಲ ಸೂಚನೆ ನೀಡಲಾಗಿದೆ. ಶಾಂತಿಯುತವಾಗಿ ಸಂಭ್ರಮ ಆಚರಿಸಿ, ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಮನೆಯಲ್ಲೇ ದೀಪ ಬೆಳಗಿ ರಾಮನ ಭವ್ಯ ಮಂದಿರದ ಲೋಕಾರ್ಪಣೆ ಹಾಗೂ ಪ್ರಾಣಪತಿಷ್ಠೆಯಲ್ಲಿ ಪಾಲ್ಗೊಳ್ಳಿ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಶಾಂತಿಯುತವಾಗಿ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸಂಭ್ರಮದಲ್ಲಿ ಪಾಲ್ಗೊಳ್ಳಲು ಯೋಗಿ ಆದಿತ್ಯನಾಥ್ ಮನವಿ ಮಾಡಿದ್ದಾರೆ.
ರಾಮ ಮಂದಿರ ಪ್ರಾಣಪ್ರತಿಷ್ಟೆಯನ್ನು ಪ್ರಧಾನಿ ನರೇಂದ್ರ ಮೋದಿ ನೇರವೇರಿಸಲಿದ್ದಾರೆ. ಜನವರಿ 22ರ 12.30ರ ಶುಭಮುಹೂರ್ತದಲ್ಲಿ ಪ್ರಾಣಪ್ರತಿಷ್ಠೆ ನಡೆಯಲಿದೆ. ಜನವರಿ 16ರಿಂದ ರಾಮನಗರಿಯಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿದೆ. ಈಗಾಗಲೇ ಮನೆ ಮನೆಗೆ ರಾಮ ಮಂದಿರದ ಮಂತ್ರಾಕ್ಷತೆ ವಿತರಣೆ ಮಾಡಲಾಗುತ್ತಿದೆ.