Asianet Suvarna News Asianet Suvarna News

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್‌ ಬಳ್ಳಾರಿ ಜೈಲ್‌ಗೆ ಶಿಫ್ಟ್‌: ನಟನನ್ನ ನೋಡಲು ಕೈದಿಗಳಲ್ಲಿ ಕಾತುರ..!

ಕೈದಿಗಳು ಜೈಲು ಸಿಬ್ಬಂದಿಯಿಂದ ಮಾಹಿತಿಯನ್ನ ಪಡೆದುಕೊಂಡಿದ್ದಾರೆ. ದರ್ಶನ್ ನೋಡಲು ಅವಕಾಶ ಸಿಗುತ್ತೆ ಎನ್ನುವ ನಿಟ್ಟಿನಲ್ಲಿ ಜೈಲಿನಲ್ಲಿರುವ ಕೈದಿಗಳು ಖುಷಿ ಪಟ್ಟಿದ್ದಾರೆ. ಸದ್ಯ 385 ಕೈದಿಗಳು ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ. 100 ಜನ ಕೊಲೆ ಆರೋಪಿಗಳು, 38 ರೌಡಿಗಳಿದ್ದರೆ. ಇನ್ನುಳಿದಂತೆ ಬೇರೆ ಬೇರೆ ಕೇಸ್‌ಗಳಿಗೆ ಸಂಬಂಧಿಸಿದ ಕೈದಿಗಳಿದ್ದಾರೆ. 

prisoners are waiting to see renukaswamy murder case accused actor darshan in ballari central jail grg
Author
First Published Aug 27, 2024, 9:18 PM IST | Last Updated Aug 27, 2024, 9:18 PM IST

ಬಳ್ಳಾರಿ(ಆ.27): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್‌ಗೆ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿನಲ್ಲಿರುವ ಕೈದಿಗಳಿಗೆ ನಟನನ್ನು ನೋಡುವ ‌ಕಾತರ ಹೆಚ್ಚಾಗಿದೆ. 

ಹೌದು, ಕೈದಿಗಳು ಜೈಲು ಸಿಬ್ಬಂದಿಯಿಂದ ಮಾಹಿತಿಯನ್ನ ಪಡೆದುಕೊಂಡಿದ್ದಾರೆ. ದರ್ಶನ್ ನೋಡಲು ಅವಕಾಶ ಸಿಗುತ್ತೆ ಎನ್ನುವ ನಿಟ್ಟಿನಲ್ಲಿ ಜೈಲಿನಲ್ಲಿರುವ ಕೈದಿಗಳು ಖುಷಿ ಪಟ್ಟಿದ್ದಾರೆ.  ಸದ್ಯ 385 ಕೈದಿಗಳು ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ. 100 ಜನ ಕೊಲೆ ಆರೋಪಿಗಳು, 38 ರೌಡಿಗಳಿದ್ದರೆ. ಇನ್ನುಳಿದಂತೆ ಬೇರೆ ಬೇರೆ ಕೇಸ್‌ಗಳಿಗೆ ಸಂಬಂಧಿಸಿದ ಕೈದಿಗಳಿದ್ದಾರೆ. 

ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್‌ಗೆ ಎ1 ಆರೋಪಿ ಸ್ಥಾನ ಕೊಡಲು ನಿರ್ಧಾರ?

ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್‌ ಆಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಕಾರಾಗೃಹದ ಬಳಿ ಬಿಗಿ ಭದ್ರತೆಯನ್ನ ಹೆಚ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ.     

Latest Videos
Follow Us:
Download App:
  • android
  • ios