ಚಿಕ್ಕಬಳ್ಳಾಪುರ [ಜು.3] : ಖಾಸಗಿ ಬಸ್ ಹಾಗೂ ಮಿನಿ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಮಂದಿ ಸಾವಿಗೀಡಾದ ಘಟನೆ  ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. 

ಚಿಕ್ಕಬಳ್ಳಾಪುರ ಜಿಲ್ಲೆಯ ಮುರುಗಮಲ್ಲಾ ಭೀಕರ ಅಪಘಾತವಾಗಿದ್ದು, 12  ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. 

ಚಿಕ್ಕಬಳ್ಳಾಪುರ - ಮುರಗಮಲ್ಲಾ ಮಾರ್ಗಮಧ್ಯೆ ತೆರಳುತ್ತಿದ್ದ ಬಸ್ ಅಪಘಾತವಾಗಿದೆ. ಈ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕೋಲಾರದ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಚಿಂತಾಮಣಿ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.