ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗಿಡ್ಡಾಪುರ ಬಳಿ ನಡೆದ ಘಟನೆ, ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು. 

ಚಿತ್ರದುರ್ಗ(ಜು.29):  ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ಪಲ್ಟಿಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗಿಡ್ಡಾಪುರ ಬಳಿ ಇಂದು(ಶನಿವಾರ) ನಡೆದಿದೆ. ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ನಾಯಕನಹಟ್ಟಿ ಕಡೆಯಿಂದ ಗರಣಿ ಕ್ರಾಸ್ ಕಡೆಗೆ ಬಸ್ ಹೋಗುತ್ತಿತ್ತು, ಎದುರುಗಡೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿದೆ ಅಂತ ತಿಳಿದು ಬಂದಿದೆ. 

ಮಂಡ್ಯದ ವಿಶ್ವೇಶ್ವರಯ್ಯ ನಾಲೆಗೆ ಕಾರು ಬಿದ್ದು ಚಾಲಕ ಸಾವು: ತಡೆಗೋಡೆ ನಿರ್ಮಿಸದ ಸರ್ಕಾರಕ್ಕೆ ಇನ್ನೆಷ್ಟು ಬಲಿ ಬೇಕು

ದುರ್ಘಟನೆಯಲ್ಲಿ ಗಾಯಗೊಂಡವನ್ನ ಚಳ್ಳಕೆರೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.