ಚಿತ್ರದುರ್ಗ(ಫೆ.19): ಲಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್‌ವೊಂದು ಪಲ್ಟಿಯಾದ ಪರಿಣಾಮ 10 ಜನರಿಗೆ‌ ಗಾಯವಾದ ಘಟನೆ ತಾಲೂಕಿನ ಕುಂಚಿಗನಾಳ ಗ್ರಾಮದ ಕಣಿವೆ ಬಳಿ ಇಂದು(ಬುಧವಾರ) ಬೆಳಗ್ಗೆ ನಡೆದಿದೆ.

ಕುಂಚಿಗನಾಳ ಗ್ರಾಮದ ಕಣಿವೆ ಬಳಿಯ ರಾಷ್ಟ್ರೀಯ ಹೆದ್ದಾರಿ‌ 4 ರಲ್ಲಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಗಾಯಳುಗಳನ್ನ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್
"