ಖಾಸಗಿ ಬಸ್ ಪಲ್ಟಿಯಾಗಿ 8 ರಿಂದ 10 ಜನರು ಗಾಯಗೊಂಡ ಘಟನೆ  ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬಾಂಬೆಗೆ ಹೋಗುತ್ತಿದ್ದ ನ್ಯಾಷನಲ್ ಟ್ರಾವೆಲ್ಸ್ ಖಾಸಗಿ ಬಸ್ ಮೋಟೆಬೆನ್ನೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.

ಹಾವೇರಿ (ಜು.08): ಖಾಸಗಿ ಬಸ್ ಪಲ್ಟಿಯಾಗಿ 8 ರಿಂದ 10 ಜನರು ಗಾಯಗೊಂಡ ಘಟನೆ ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬಾಂಬೆಗೆ ಹೋಗುತ್ತಿದ್ದ ನ್ಯಾಷನಲ್ ಟ್ರಾವೆಲ್ಸ್ ಖಾಸಗಿ ಬಸ್ ಮೋಟೆಬೆನ್ನೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.

ಇದರಿಂದಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು ಎಂಟರಿಂದ ಹತ್ತು ಜನರಿಗೆ ಗಾಯಗಳಾಗಿವೆ. ಪ್ರಯಾಣಿಕರೊಬ್ಬರು 112ಗೆ ಕರೆ ಮಾಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಗೊಂಡವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಗಾಯಾಳುಗಳಲ್ಲಿ ಬಾಂಬೆ ಮೂಲದ 65 ವರ್ಷದ ಜುಬೇದಾ ಮಹಮ್ಮದ ಅಲಿ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡ ಪರಿಣಾಮ ಪರಿಸ್ಥಿತಿ ಚಿಂತಾಜನಕವಾಗಿದೆ. ಕೂಡಲೇ ಎಲ್ಲ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bidar: ಹಳಿ ಮೇಲೆ ನಿಂತ ಲಾರಿಗೆ ರೈಲು ಡಿಕ್ಕಿ: ತಪ್ಪಿದ ಭಾರಿ ಅನಾಹುತ

ಕಾರು-ಬಸ್‌ ಮುಖಾಮುಖಿ ಡಿಕ್ಕಿ: ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಮತ್ತಿಹಳ್ಳಿ ಗೇಟ್‌ ತಿರುವಿನಲ್ಲಿ ನಿನ್ನೆ(ಗುರುವಾರ) ಸಂಭವಿಸಿದೆ. ತುಮಕೂರು ಗ್ರಾಮಾಂತರ ಬೆಳ್ಳಾವಿಯ ಗೊಲ್ಲರಹಟ್ಟಿ ಗ್ರಾಮದ ಸಿದ್ದರಾಜು (38), ಮೋಹನ್‌ (35), ರಾಜಣ್ಣ (28) ಮೃತ ದುರ್ದೈವಿಗಳು. 

ಕಂದಕಕ್ಕೆ ಉರುಳಿದ ಬಸ್ 9 ಶಾಲಾ ಮಕ್ಕಳು ಸೇರಿ 16 ಸಾವು!

ಸ್ಯಾಂಟ್ರೋ ಕಾರು ಶಿರಾದಿಂದ ಅರಸೀಕೆರೆ ಕಡೆಗೆ ಮತ್ತು ಬಸ್‌ ಅರಸೀಕೆರೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ನುಗ್ಗಿದೆ. ಘಟನಾ ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಹಾಗೂ ಆ್ಯಂಬುಲೆನ್ಸ್‌ ಸಿಬ್ಬಂದಿ ದೌಡಾಯಿಸಿ ಗಾಯಗೊಂಡವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ದೇಹಗಳು ತಿಪಟೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿದ್ದು ಹೊನ್ನವಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.