Asianet Suvarna News Asianet Suvarna News

ಚಪಕ್‌ ಚಿತ್ರಕ್ಕೆ ಬೆಂಬಲ: ಚಿತ್ರಮಂದಿರದ ಎಲ್ಲ ಟಿಕೆಟ್ ಬುಕ್ ಮಾಡಿದ 'ಕೈ' ಶಾಸಕ

ಚಪಕ್‌ ಚಿತ್ರಕ್ಕೆ ಬೆಂಬಲ ಸೂಚಿಸಿದ ಕಾಂಗ್ರೆಸ್ ಕಾರ್ಯಕರ್ತರು| ಕಾಂಗ್ರೆಸ್ ಕಾರ್ಯಕರ್ತರಿಗಾಗಿ ನಗರದ ಮೀರಜ್ ಚಿತ್ರಮಂದಿರದಲ್ಲಿ ಪ್ರದರ್ಶನ ಕಾಣುತ್ತಿದ್ದ ಚಪಕ್‌ ಸಿನಿಮಾ ಶೋದ ಎಲ್ಲಾ ಟಿಕೆಟ್‌ಗಳನ್ನು ಬುಕ್ ಮಾಡಿದ ಪ್ರಿಯಾಂಕ್ ಖರ್ಗೆ|

Priyank Kharge Booked Entire Chapak Movie Show in Kalaburgi
Author
Bengaluru, First Published Jan 11, 2020, 3:23 PM IST
  • Facebook
  • Twitter
  • Whatsapp

ಕಲಬುರಗಿ(ಜ.11): ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೆಎನ್‌ಯು ಪ್ರತಿಭಟನಾಕಾರರಿಗೆ ಬೆಂಬಲ ನೀಡಿದ್ದನ್ನು ವಿರೋಧಿಸಿದ ಬಿಜೆಪಿ ಕಾರ್ಯಕರ್ತರು ಚಪಕ್‌ ಚಿತ್ರವನ್ನು ನಿಷೇಧಿಸುವಂತೆ ಆಗ್ರಹಿಸಿದೆ. ಆದರೆ, ಕಾಂಗ್ರೆಸ್ ಪಕ್ಷ ಈ ಚಿತ್ರಕ್ಕೆ ಬೆಂಬಲ ಸೂಚಿಸುವ ಮೂಲಕ ಬಿಜೆಪಿಗೆ ಕಾಂಗ್ರೆಸ್‌ ತಿರುಗೇಟು ನೀಡಿದೆ. 

ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕರ್ತರಿಗಾಗಿ ನಗರದ ಮೀರಜ್ ಚಿತ್ರಮಂದಿರದಲ್ಲಿ ಪ್ರದರ್ಶನ ಕಾಣುತ್ತಿದ್ದ ಚಪಕ್‌ ಸಿನಿಮಾ ಶೋದ ಎಲ್ಲಾ ಟಿಕೆಟ್‌ಗಳನ್ನು ಬುಕ್ ಮಾಡಿದ್ದಾರೆ. 
ಚಿತ್ರ ನೋಡಲು ಬಂದ ಕಾಂಗ್ರೆಸ್ ಕಾರ್ಯಕರ್ತರು ವ್ಹೀ ಸಪೋರ್ಟ್‌ ಚಪಕ್‌..ವ್ಹೀ ಸಪೋರ್ಟ್‌ ದೀಪಿಕಾ ಎಂದು ಘೋಷಣೆಗಳನ್ನು ಕೂಗುವ ಮೂಲಕ ದೀಪಿಕಾ ಪಡುಕೋಣೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

JNU ಹೋರಾಟಕ್ಕೆ ದೀಪಿಕಾ ಪಡುಕೋಣೆ ಬೆಂಬಲ! 

ಮಧ್ಯಾಹ್ನ 1 ಗಂಟೆಯ ಶೋದಲ್ಲಿ ಮೀರಜ್ ಚಿತ್ರಮಂದಿರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ತುಂಬಿ ತುಳುಕುತ್ತಿದ್ದರು. ಚಪಕ್‌ ಚಿತ್ರಕ್ಕೆ ಚಿತ್ರ ನೋಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತತು ಬಿಜೆಪಿಗೆ ತಿರುಗೇಟು ನೀಡಿದ್ದಾರೆ. 

ಈ ಚಿತ್ರ ನೋಡುವ ಮೂಲಕ ದೀಪಿಕಾಗೆ ಬೆಂಬಲಿಸಲು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಮನವಿಗೆ ಜಿಲ್ಲಾ ಕಾಂಗ್ರೆಸ್ ಯುವ ಘಟಕದಿಂದ ಭರ್ಜರಿ ಬೆಂಬಲ ವ್ಯಕ್ತವಾಗಿದೆ.

ರಿಲೀಸ್‌ಗೂ ಮುನ್ನ 'ಚಪಕ್‌'ಗೆ ಎದುರಾಯ್ತು ಸಂಕಷ್ಟ!

ಇತ್ತೀಚೆಗೆ ದೆಹಲಿಯ ಜೆಎನ್‌ಯುದಲ್ಲಿ ನಡೆದ ಹಿಂಸಾಚಾರ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ದೀಪಿಕಾ ಭಾಗವಹಿಸಿದ್ದರು. ವಿದ್ಯಾರ್ಥಿಗಳ ಹೋರಾಟಕ್ಕೆ ದೀಪಿಕಾ ಪಡುಕೋಣೆ ಅವರು ನೈತಿಕ ಬೆಂಬಲ ವ್ಯಕ್ತಪಡಿಸಿದ್ದರು.

ಜನವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Follow Us:
Download App:
  • android
  • ios