ಕೇಂದ್ರ ಸರ್ಕಾರದ ಬಿಜೆಪಿ ಸರ್ಕಾರ ನಾರಿಶಕ್ತಿ ವಂದನ್ ಮಸೂದೆ ಬದಲಾಗಿ 2023ರ ಮಹಿಳಾ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಆಗ್ರಹಿಸಿದರು.

ಚಿಕ್ಕೋಡಿ (ಏ.30): ಕೇಂದ್ರದ ಬಿಜೆಪಿ ಸರ್ಕಾರ ನಾರಿಶಕ್ತಿ ವಂದನ್ ಮಸೂದೆ ಬದಲಾಗಿ 2023ರ ಮಹಿಳಾ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಆಗ್ರಹಿಸಿದರು.

Add Asianetnews Kannada as a Preferred SourcegooglePreferred

ಚಿಕ್ಕೋಡಿ ಪಟ್ಟಣದ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜೀವ್ ಗಾಂಧಿ ಪ್ರಧಾನ ಮಂತ್ರಿಯಾಗಿದ್ದಾಗ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ತರಲಾಗಿತ್ತು. ಕಾಂಗ್ರೆಸ್ ಮಹಿಳಾ ವಿರೋಧಿ ಎಂಬ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕಿಡಿಕಾರಿದರು.

ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿ ತರುವ ಮಸೂದೆಯನ್ನು ತರಾತುರಿಯಲ್ಲಿ ಮಂಡಿಸಿದ್ದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಮಣಿಪುರ, ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದರೂ ಅದನ್ನು ವಿರೋಧಿಸದ ಬಿಜೆಪಿಯ ಮಹಿಳೆಯರ ಕಾಳಜಿ ತೋರುವ ಬಣ್ಣ ಕಳಚಿದಂತಾಗಿದೆ ಎಂದು ಟೀಕಿಸಿದರು.

ಮಹಿಳೆಯರ ಪರ

ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮಾತನಾಡಿ, ಮಹಿಳಾ ಮೀಸಲಾತಿ ಮಸೂದೆಯೊಂದಿಗೆ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಹೊರಟಿದ್ದ ಬಿಜೆಪಿ ಸರ್ಕಾರದ ಕ್ರಮ ಸಂಶಯಕ್ಕೆ ಎಡೆ ಮಾಡಿಕೊಡುವಂತಿತ್ತು. ಹೀಗಾಗಿಯೇ, ಸಂಸತ್ತಿನಲ್ಲಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿದ್ದವು. ಕಾಂಗ್ರೆಸ್ ಮಹಿಳೆಯರ ಪರವಾಗಿದೆ ಎಂಬುವುದಕ್ಕೆ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದಿದ್ದನ್ನು ಇಲ್ಲಿ ಸ್ಮರಿಸಬಹುದು ಎಂದರು.